ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಅಮರಾವತಿಯಲ್ಲಿ ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಬ್ಯಾಗ್ ನ್ನು ಚುನಾವಣಾ ಆಯೋಗದ ಅಧಿಕಾರಿಗಳು ಶನಿವಾರ ಪರಿಶೀಲಿಸಿದ್ದಾರೆ.
ಬಿಜೆಪಿ ಮತ್ತು ವಿರೋಧ ಪಕ್ಷಗಳ ನಡುವಿನ ರಾಜಕೀಯ ಗದ್ದಲದ ನಡುವೆ ರಾಹುಲ್ ಗಾಂಧಿ ಅವರ ಬ್ಯಾಗ್ ಪರಿಶೀಲಿಸಿದ್ದಾರೆ. ಈ ಕುರಿತ ವೀಡಿಯೋವೊಂದು ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
ಬ್ಯಾಗ್ ಪರಿಶೀಲನೆ ಮುಂದುವರಿಯುತ್ತಿದ್ದಂತೆ, ರಾಹುಲ್ ಗಾಂಧಿ ಹೊರನಡೆದರು ಮತ್ತು ಪಕ್ಷದ ನಾಯಕರೊಂದಿಗೆ ತೊಡಗಿರುವುದು ಕಂಡುಬಂದಿದೆ.
ಒಂದು ದಿನದ ಹಿಂದೆಯಷ್ಟೇ ಜಾರ್ಖಂಡ್‌ನ ಗೊಡ್ಡಾದಲ್ಲಿ ಹೆಲಿಕಾಪ್ಟರ್ ಟೇಕ್ ಆಫ್‌ಗೆ ಏರ್ ಟ್ರಾಫಿಕ್ ಕಂಟ್ರೋಲ್ ತಡವಾಗಿ ಅನುಮತಿ ನೀಡಿದ ಪರಿಣಾಮ ರಾಹುಲ್ ಗಾಂಧಿ ಅವರ ಪ್ರಯಾಣ 45 ನಿಮಿಷಗಳ ಕಾಲ ವಿಳಂಬವಾಗಿತ್ತು.ಈ ಹಿನ್ನೆಲೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿತ್ತು. ಇದೀಗ ಒಂದು ದಿನದ ನಂತರ ಕಾಂಗ್ರೆಸ್ ನಾಯಕನ ಬ್ಯಾಗ್ ಶೋಧಿಸಲಾಯಿತು.
ಕಾಂಗ್ರೆಸ್ ತನ್ನ ದೂರಿನಲ್ಲಿ, ಚುನಾವಣಾ ಪ್ರಚಾರದಲ್ಲಿ ಸಮಾನ ಅವಕಾಶವನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗದ ತುರ್ತು ಮಧ್ಯಪ್ರವೇಶವನ್ನು ಕೋರಿದೆ. ನಿರ್ಬಂಧಗಳಿಂದಾಗಿ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ಟೇಕ್ ಆಫ್ ಆಗಲು ಅವಕಾಶ ನೀಡಲಿಲ್ಲ, ಇದರಿಂದಾಗಿ ಅವರ ಸಾರ್ವಜನಿಕ ಸಭೆಗಳು ವಿಳಂಬವಾಗುತ್ತವೆ ಅಥವಾ ರದ್ದುಗೊಳ್ಳುತ್ತವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಆರೋಪಿಸಿದ್ದಾರೆ.