ಮಹಾ ಕುಂಭಮೇಳ : ತ್ರಿವೇಣಿ ಸಂಗಮದಲ್ಲಿಂದು ಮೋದಿ ಪುಣ್ಯ ಸ್ನಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಂದು ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಈ ಹೊತ್ತಿನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರಿಂದು ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳಕ್ಕೆ ಭೇಟಿ ನೀಡಲಿದ್ದು, ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಲಿದ್ದಾರೆ.

ಪ್ರಧಾನಿ ಮೋದಿ ಬೆಳಗ್ಗೆ 10:05ಕ್ಕೆ ಪ್ರಯಾಗ್‌ರಾಜ್ ವಿಮಾನ ನಿಲ್ದಾಣಕ್ಕೆ  ಆಗಮಿಸಲಿದ್ದು, ಅಲ್ಲಿಂದ ಬೆಳಗ್ಗೆ 10:10ಕ್ಕೆ ಡಿಪಿಎಸ್ ಹೆಲಿಪ್ಯಾಡ್‌ಗೆ ಪ್ರಯಾಣಿಸಿ, ನಂತರ 10:45 ಕ್ಕೆ ಏರಿಯಲ್ ಘಾಟ್‌ಗೆ ತೆರಳಲಿದ್ದಾರೆ. 10:50ಕ್ಕೆ ಏರಿಯಲ್ ಘಾಟ್‌ನಿಂದ ಮಹಾಕುಂಭಕ್ಕೆ ದೋಣಿಯಲ್ಲಿ ಪ್ರಯಾಣಿಸಲಿದ್ದಾರೆ. ಅಲ್ಲಿ ಅವರು ಬೆಳಗ್ಗೆ 11:00 ರಿಂದ 11:30ರ ವರೆಗೆ ಸಂಗಮ್ ಘಾಟ್‌ನಲ್ಲಿ ಪುಣ್ಯ ಸ್ನಾನ ಮಾಡಲಿದ್ದಾರೆ.

ಬೆಳಗ್ಗೆ 11:45ಕ್ಕೆ ಅವರು ದೋಣಿಯಲ್ಲಿ ಏರಿಯಲ್ ಘಾಟ್‌ಗೆ ಹಿಂತಿರುಗಿ ನಂತರ ಡಿಪಿಎಸ್ ಹೆಲಿಪ್ಯಾಡ್‌ಗೆ ವಾಪಸ್ ಆಗ್ತಾರೆ. ಅಲ್ಲಿಂದ ಅವರು ಪ್ರಯಾಗ್‌ರಾಜ್ ವಿಮಾನ ನಿಲ್ದಾಣಕ್ಕೆ ತೆರಳುತ್ತಾರೆ. ಮಧ್ಯಾಹ್ನ 12:30ಕ್ಕೆ ವಾಯುಪಡೆಯ ವಿಮಾನದಲ್ಲಿ ಪ್ರಯಾಗ್‌ರಾಜ್‌ನಿಂದ ಹೊರಡಲಿದ್ದಾರೆ.
- Advertisement - Ply

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!