ರಾಜ್ಯ ಬಿಜೆಪಿಯಿಂದ “ಮಹಾ ಪರಿನಿರ್ವಾಣ ದಿನಾಚರಣೆ”

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೆಂಗಳೂರು ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ರಾಜ್ಯ ಎಸ್‍ಸಿ ಮತ್ತು ಎಸ್‍ಟಿ ಮೋರ್ಚಾಗಳ ಸಹಯೋಗದೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ “ಮಹಾ ಪರಿನಿರ್ವಾಣ ದಿನಾಚರಣೆ” ನಡೆಯಿತು. ಬಾಬಾ ಸಾಹೇಬರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು.

ಈ ವೇಳೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಎಸ್‍ಟಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ನರಸಿಂಹ ನಾಯಕ ಅವರು ಭಾಗವಹಿಸಿ ಮಾತನಾಡಿ, ಸಂವಿಧಾನ ಕರ್ತೃ ಡಾ. ಬಿ.ಆರ್.ಅಂಬೇಡ್ಕರ್ ಅವರು ಮಹಾನ್ ನಾಯಕತ್ವ ಹೊಂದಿದ್ದರು. ಅವರ ಶ್ರೇಷ್ಠ ಗುಣಗಳನ್ನು ನಾವು ಅಳವಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಂ.ಬಿ. ಭಾನುಪ್ರಕಾಶ್, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ಪಕ್ಷದ ಮುಖಂಡರು, ಕಾರ್ಯಕರ್ತರು, ಕಾರ್ಯಾಲಯದ ಸಿಬ್ಬಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!