Tuesday, May 30, 2023

Latest Posts

ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆಯ ‘ಮಹಾ ಸಂಗಮ’ ಲಕ್ಷಾಂತರ ಮಂದಿ ಭಾಗಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ಮೋದಿ ಅವರು ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಇಂದು ದಾವಣಗೆರೆಯಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಮಹಾ ಸಂಗಮ ಸಮಾವೇಶ ನಡೆಯಲಿದೆ.

ಲಕ್ಷಾಂತರ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆಯಿದ್ದು, ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಈ ವರ್ಷ ಪ್ರಧಾನಿ ಮೋದಿ ಏಳನೇ ಬಾರಿ ರಾಜ್ಯಕ್ಕೆ ಆಗಮಿಸಿದ್ದು, ಇದು ಕೊನೆಯ ಭೇಟಿ ಆಗಿರಲಿದೆ.

ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ರಾಜ್ಯ ಬಿಜೆಪಿ ನಾಯಕರು ಎಲ್ಲೆಡೆ ವಿಜಯಸಂಕಲ್ಪ ಯಾತ್ರೆ ಕೈಗೊಂಡಿದ್ದರು. ಅದರ ಮಹಾ ಸಂಗಮವು ಮಧ್ಯ ಕರ್ನಾಟಕ ದಾವಣಗೆರೆಯಲ್ಲಿ ನಡೆಯಲಿದ್ದು, ೧೦ ಲಕ್ಷಕ್ಕೂ ಹೆಚ್ಚು ಮಂದಿ ಸೇರುವ ನಿರೀಕ್ಷೆಯಿದೆ.

ಮಹಾ ಸಂಗಮ ಹಿನ್ನೆಲೆ ಸಕಲ ಸಿದ್ಧತೆ ನಡೆದಿದ್ದು, ಜನರಿಗೆ ಊಟ, ಉಪಹಾರ ಹಾಗೂ ಪಾನೀಯದ ವ್ಯವಸ್ಥೆ ಮಾಡಲಾಗಿದೆ. ಇದುವರೆಗೆ ಪ್ರಧಾನಿ ಮೋದಿ ರಾಜ್ಯದಲ್ಲಿ ಭಾಗಿಯಾಗಿರುವ ಸಮಾವೇಶಗಳಲ್ಲೇ ಇಂದು ದಾವಣಗೆರೆಯಲ್ಲಿ ನಡೆಯಲಿರುವ ಸಮಾವೇಶ ದೊಡ್ಡದಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!