ಫೆ.26 ರಂದು ಮಹಾ ಶಿವರಾತ್ರಿ: ಸಿಲಿಕಾನ್ ಸಿಟಿಯಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಫೆಬ್ರವರಿ 26ರಂದು ಬೆಂಗಳೂರಿನಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧಿಸಲಾಗಿದೆ.

ಈ ಕುರಿತು ಬಿಬಿಎಂಪಿ ಆದೇಶ ಹೊರಡಿಸಿದ್ದು, ಎಲ್ಲ ಕಸಾಯಿಖಾನೆ ಮುಚ್ಚುವಂತೆ ಆದೇಶಿಸಿದ್ದು, ಒಂದು ವೇಳೆ ಆದೇಶ ಉಲ್ಲಂಘಿಸಿ ಪ್ರಾಣಿ ವಧೆ, ಮಾಂಸ ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಎಚ್ಚರಿಕೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!