ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಮತದಾನ ಮುಕ್ತಾಯವಾಗಿದೆ. ಮತದಾರ ಪ್ರಭುಗಳು ಅಭ್ಯರ್ಥಿಗಳ ಹಣೆಬರಹವನ್ನು ಮತಪೆಟ್ಟಿಗೆಯಲ್ಲಿ ಭದ್ರ ಮಾಡಿದ್ದಾರೆ.
ಇತ್ತ ಚುನಾವಣೆ ಮುಗಿಯುತ್ತಿದ್ದಂತೆ ಚುನಾವಣೋತ್ತರ ಸಮೀಕ್ಷಾ ಫಲಿತಾಂಶಗಳು ಹೊರ ಬಿದ್ದಿವೆ. ಮ್ಯಾಟ್ರಿಜ್ ಸಂಸ್ಥೆ ನಡೆಸಿದ ಎಕ್ಸಿಟ್ ಪೋಲ್ ಫಲಿತಾಂಶ ಇದೀಗ ಹೊರಬಿದ್ದಿದೆ. ಬಿಜೆಪಿ ನೇತೃತ್ವದ ಮಹಾಯುತಿಗೆ ಈ ಬಾರಿ ಅಧಿಕಾರ ಸಿಗೋದು ಪಕ್ಕಾ ಅಂತ ಸಮೀಕ್ಷೆ ಹೇಳಿದೆ.
ಇದರಿಂದಾಗಿ ಕಾಂಗ್ರೆಸ್, ಎಸ್‌ಸಿಪಿ ಹಾಗೂ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಒಳಗೊಂಡ ಮಹಾವಿಕಾಸ್ ಅಘಾಡಿಗೆ ಭಾರೀ ಆಘಾತವಾಗಿದೆ.
ಮ್ಯಾಟ್ರಿಜ್ ಸಂಸ್ಥೆ ಸಮೀಕ್ಷೆ ಪ್ರಕಾರ ಈ ಬಾರಿ ಬಿಜೆಪಿ ನೇತೃತ್ವದ ಎನ್‌ಡಿಎ ಮಹಾರಾಷ್ಟ್ರದಲ್ಲಿ ಅಧಿಕಾರದ ಗದ್ದುಗೆ ಏರಲಿದೆ. ಎನ್‌ಡಿಎ 150ರಿಂದ 170 ಸ್ಥಾನಗಳನ್ನು ಪಡೆಯಲಿದೆ ಅಂತ ಸಮೀಕ್ಷೆ ಹೇಳಿದೆ.
ಇನ್ನು ಕಾಂಗ್ರೆಸ್, ಶರದ್ ಪವಾರ್ ಅವರ ಎನ್‌ಸಿಪಿ ಹಾಗೂ ಉದ್ಧವ್ ಠಾಕ್ರೆ ಬಣದ ಶಿವಸೇನೆ ನೇತೃತ್ವದ ಮಹಾ ವಿಕಾಸ್ ಅಘಾಡಿಗೆ 110 ರಿಂದ 130 ಸ್ಥಾನ ದಕ್ಕುವ ಸಾಧ್ಯತೆ ಇದೆ. ಇನ್ನು ಇತರರು 08ರಿಂದ 10 ಕ್ಷೇತ್ರಗಳಲ್ಲಿ ಗೆಲುವು ಪಡೆಯುವ ಸಾಧ್ಯದೆ ಇದೆ ಎಂದು ಸಮೀಕ್ಷೆ ಹೇಳಿದೆ.