ಹೊಸದಿಗಂತ ಡಿಜಿಟಲ್ ಡೆಸ್ಕ್
ಮೃತ ವ್ಯಕ್ತಿಯ ಚಿತೆಗೆ ಅಗ್ನಿಸ್ಪರ್ಶ ಮಾಡುವ ವೇಳೆ ಆಕಸ್ಮಿಕ ಬೆಂಕಿ ತಗುಲಿ ಇಬ್ಬರು ಸಾವನ್ನಪ್ಪಿದ ದಾರುಣ ಘಟನೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕಾಂಪ್ಟಿಯಲ್ಲಿ ನಡೆದಿದೆ.
ವ್ಯಕ್ತಿಯೊಬ್ಬರ ಅಂತಿಮ ಸಂಸ್ಕಾರಕ್ಕೆ ತೆರಳಿದ್ದ ವೇಳೆ ಬೆಂಕಿ ಹಚ್ಚಲು ಬಳಸಿದ್ದ ಡೀಸೆಲ್ ಕ್ಯಾನ್‌ಗೆ ಬೆಂಕಿ ಹೊತ್ತಿಕೊಂಡು ಸ್ಥಳದಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಮೃತದೇಹಕ್ಕೆ ಬೆಂಕಿ ಹಚ್ಚಿದ ನಂತರ ಮೂವರು ಅದರ ಮೇಲೆ ಡೀಸೆಲ್ ಸುರಿಯುತ್ತಿದ್ದ ವೇಳೆ ಡೀಸೆಲ್ ಕ್ಯಾನ್ ಗೆ ಬೆಂಕಿ ಹೊತ್ತಿಕೊಂಡು ಅವಘಡ ಸಂಭವಿಸಿದೆ.
ತಕ್ಷಣವೇ ಮೂವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಅರು ಸುಧೀರ್ ಡೋಂಗ್ರೆ (45) ಮತ್ತು ದಿಲೀಪ್ ಖೋಬ್ರಗಡೆ (60) ಮೃತಪಟ್ಟವರು. ಇನ್ನೊಬ್ಬ ವ್ಯಕ್ತಿ ಸುಧಾಕರ ಖೋಬ್ರಗಡೆ (50) ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲಾ ಕೇಂದ್ರದಿಂದ ಸುಮಾರು 30 ಕಿಮೀ ದೂರದಲ್ಲಿರುವ ಕ್ಯಾಂಪ್ಟಿಯ ಸ್ಮಶಾನ ಸ್ಥಳವಾದ ಮೋಕ್ಷ ಧಾಮ್ ಘಾಟ್‌ನಲ್ಲಿ ಗುರುವಾರ ಸಂಜೆ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ