ಮಹದಾಯಿ ನೀರು ವಿವಾದ: ಕಣಕುಂಬಿಗೆ ಕೇಂದ್ರ ‘ಪ್ರವಾಹ್’ ತಂಡ ಭೇಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಚಿಸಿದ ‘ಪ್ರವಾಹ್’ Progressive River Authority For Water and Harmony ತಂಡ ಮಹದಾಯಿ ಜಲಾನಯನ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಮುಖ್ಯಸ್ಥ ಪಿ.ಎಂ.ಸ್ಕ್ವಾಟ್‌, ಸದಸ್ಯರಾದ ವೀರೇಂದ್ರ ಶರ್ಮಾ, ಮನೋಜ್‌ ತಿವಾರಿ, ನೀರಜ್‌ ಮಂಗಲಿಕ, ಮಿಲಿಂದ ನಾಯ್ಕ, ಸುಭಾಷಚಂದ್ರ, ಪ್ರಮೋದ ಬಾದಾಮಿ, ರಾಜೇಶ ಅಮ್ಮಿನಭಾವಿ ಅವರನ್ನು ಒಳಗೊಂಡ ತಂಡ ಬೆಳಿಗ್ಗೆ ಗೋವಾದ ಪಣಜಿಯಿಂದ ಹೊರಟಿತು.

ಕಣಕುಂಬಿ ಅರಣ್ಯದ ಹಳತಾರಾ ನಾಲೆ, ಸುರ್ಲಾ ನಾಲೆ, ಕಳಸಾ ನಾಲೆಗೆ ತಂಡ ಭೇಟಿ ನೀಡಿ ಪರಿಶೀಲಿಸಿತು. ನಂತರ ಕಣಕುಂಬಿ ಪ್ರವಾಸಿ ಮಂದಿರಕ್ಕೆ ತೆರಳಿ ಸಭೆ ನಡೆಸಿತು. ಈ ವೇಳೆ ಕೇಂದ್ರದ ತಂಡಕ್ಕೆ ಕರ್ನಾಟಕ ನೀರಾವರಿ ನಿಗಮದ ಹಿರಿಯ ಅಧಿಕಾರಿಗಳು, ಯೋಜನೆ ಅನುಷ್ಠಾನದ ಬಗ್ಗೆ ಸಮಗ್ರವಾಗಿ ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!