ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹದಾಯಿ ಯೋಜನೆಗೆ ವನ್ಯಜೀವಿ ಮಂಡಳಿ ಅನುಮತಿ ನಿರಾಕರಣೆ ಮಾಡಿದ್ದು, ಹೀಗಾಗಿ ಪ್ರಧಾನಿ ಬಳಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯಲು ರಾಜ್ಯ ಸರ್ಕಾರ ತೀರ್ಮಾನಿಸಿದೆ
ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ಕೆ ಪಾಟೀಲ್, ‘ಗೋವಾದ ವಿದ್ಯುತ್ ಯೋಜನೆಗೆ ರಾಜ್ಯದ 435 ಎಕರೆ ಅರಣ್ಯ ಭೂಮಿ ಬಳಕೆಯಾಗುವ ಯೋಜನೆಗೆ ವನ್ಯಜೀವಿ ಮಂಡಳಿ ಅನುಮತಿ ಕೊಟ್ಟಿದೆ. ಆದರೆ, ನಮ್ಮ ರಾಜ್ಯದ ಮಹದಾಯಿ ಯೋಜನೆಗೆ ಅನುಮತಿ ಕೊಟ್ಟಿಲ್ಲ. ಇದರಿಂದ ರಾಜ್ಯಕ್ಕೆ ಅನ್ಯಾಯ ಆಗಿದೆ ಎಂದರು.
ಗೋವಾ – ತಮ್ನಾರ್ 400 ಕೆವಿ ವಿದ್ಯುತ್ ಪೂರೈಕೆ ಯೋಜನೆಗೆ ಅನುಮತಿ ಕೊಡಲಾಗಿದೆ. ಆದರೆ, ಮಹಾದಾಯಿ ಯೋಜನೆಗೆ ಅನುಮತಿ ಕೊಡದೆಯಿರುವ ಹಿನ್ನೆಲೆ ಸರ್ವಪಕ್ಷ ಸಭೆ ನಡೆಸಲು ತಿರ್ಮಾನಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಬಳಿಗೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲು ತಿರ್ಮಾನಿಸಿದೆ. ಅಷ್ಟೇ ಅಲ್ಲದೆ ಕಾನೂನು ತಜ್ಞರ ಸಲಹೆಯಂತೆ ಸುಪ್ರೀಂ ಕೋರ್ಟ್ಗೆ ಅರ್ಜಿ ಹಾಕಲು ಸಹ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಹೇಳಿದರು.