ಮಹದೇವ್ ಆನ್ ಲೈನ್ ಬೆಟ್ಟಿಂಗ್ ಆಪ್ ಪ್ರಕರಣ: ರಣಬೀರ್ ಕಪೂರ್ ಸಹಿತ 34 ಸೆಲೆಬ್ರಿಟಿಗಳಿಗೆ ನೋಟಿಸ್?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹದೇವ್ ಆನ್ ಲೈನ್ ಬೆಟ್ಟಿಂಗ್ ಆಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನ ಖ್ಯಾತ ನಟ ರಣಬೀರ್ ಕಪೂರ್, ಹಾಸ್ಯ ನಿರೂಪಕ ಕಪಿಲ್ ಶರ್ಮಾ (Kapil Sharma) ಸೇರಿದಂತೆ ಬಿಟೌನ್‍ನ ಒಟ್ಟು 34 ಸೆಲೆಬ್ರಿಟಿಗಳಿಗೆ ಜಾರಿ ನಿರ್ದೇಶನಾಲಯ (ED) ಸಮನ್ಸ್ ಜಾರಿ ಮಾಡಿದೆ ನೋಟಿಸ್ (Notice) ಜಾರಿ ಮಾಡಿದ್ದು, ನಿನ್ನೆಯಿಂದಲೇ ಹಲವರಿಗೆ ವಿಚಾರಣೆಗೆ ಕರೆದಿದೆ.

ಕೇವಲ ಕಪಿಲ್ ಶರ್ಮಾಗೆ ಮಾತ್ರವಲ್ಲ, ರಣಬೀರ್ ಕಪೂರ್, ಶ್ರದ್ಧಾ ಕಪೂರ್ (Shraddha Kapoor), ಹುಮಾ ಖುರೇಷಿ ಹಾಗೂ ಹೀನಾ ಖಾನ್ ಸೇರಿದಂತೆ ಹಲವರಿಗೆ ಇಡಿ ನೋಟಿಸ್ ನೀಡಿದೆ. ಈ ಪ್ರಕರಣದಲ್ಲಿ ಒಟ್ಟು 17 ಬಾಲಿವುಡ್ ಸಿಲಿಬ್ರಿಟಿಗಳಿಗೆ ನೋಟಿಸ್ ನೀಡಿದ್ದಾರೆ ಎಂದು ನಿನ್ನೆ ತಿಳಿದು ಬಂದಿತ್ತು. ಆದರೆ, ಈವರೆಗೂ 34 ಜನರಿಗೆ ನೋಟಿಸ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಏನಿದು ಪ್ರಕರಣ?
ಮಹದೇವ್ ಬೆಟ್ಟಿಂಗ್ (Mahadev Betting) ಆಪ್‍ನ ಮುಖ್ಯಸ್ಥನ ಸೌರಭ್ ಚಂದ್ರಕರ್ ಅವರ ಮದುವೆ ಅದ್ಧೂರಿಯಾಗಿ ದುಬೈನಲ್ಲಿ ನಡೆದಿತ್ತು. ಮುಂಬೈ ಮೂಲದ ಇವೆಂಟ್ ಮ್ಯಾನೇಜ್ ಮೆಂಟ್ ಕಂಪೆನಿಗೆ ಮದುವೆಯ ಉಸ್ತುವಾರಿ ನೀಡಿತ್ತು. ಈ ಇವೆಂಟ್ ಮ್ಯಾನೇಜ್ ಮೆಂಟ್ ಹಲವಾರು ಸಿಲಿಬ್ರಿಟಿಗಳನ್ನು ಮದುವೆಗೆ ಆಹ್ವಾನ ನೀಡಿತ್ತು. ಇವೆಂಟ್ ಮ್ಯಾನೇಜ್ ಮೆಂಟ್ ಕಂಪೆನಿಗೆ ಸೌರಭ್ 140 ಕೋಟಿ ರೂಪಾಯಿ ಹವಾಲ ಹಣ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಸಿಲಿಬ್ರಿಟಿಗಳಿಗೂ ಈ ಹಣ ಪಾವತಿ ಆಗಿರುವುದರಿಂದ ಹಣ ಪಡೆದವರಿಗೆ ನೋಟಿಸ್ ನೀಡಿ, ವಿಚಾರಣೆ ಮಾಡಲಾಗುತ್ತಿದೆ. ಒಟ್ಟು ಈ ಮದುವೆಗೆ 200 ಕೋಟಿ ರೂಪಾಯಿ ಖರ್ಚಾಗಿದೆ ಎಂದು ಇಡಿ ತನಿಖೆಯಿಂದ ತಿಳಿದು ಬಂದಿದೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!