Wednesday, August 17, 2022

Latest Posts

ಕೊರೋನಾ ಸೋಂಕಿಗೆ ಸಿಎಂ ಬಿಎಸ್ ವೈ ಮಾಜಿ ಮಾಧ್ಯಮ ಸಲಹೆಗಾರ ಮಹದೇವ್ ಪ್ರಕಾಶ್ ಬಲಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಸೋಂಕಿಗೆ ಹಿರಿಯ ಪತ್ರಕರ್ತ, ಸಿಎಂ ಮಾಜಿ ಮಾಧ್ಯಮ ಸಲಹೆಗಾರ ಮಹದೇವ್ ಪ್ರಕಾಶ್ (65) ಬಲಿಯಾಗಿದ್ದಾರೆ.
ಕೊರೋನಾ ಧೃಡವಾದ ಹಿನ್ನೆಲೆ ಕಳೆದ 10 ದಿನಗಳ ಹಿಂದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹಿರಿಯ ಪತ್ರಕರ್ತರಾಗಿದ್ದ ಮಹದೇವ್ ಪ್ರಕಾಶ್ ಅವರು ಸಿಎಂ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿ ಕೂಡ ಸೇವೆ ಸಲ್ಲಿಸಿದ್ದರು. ಅಂಕಣಕಾರರು, ರಾಜಕೀಯ ವಿಶ್ಲೇಷಕರಾಗಿ, ಬರಹಗಾರರಾಗಿ ಗುರುತಿಸಿಕೊಂಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!