ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಹಾಲು ಮತ್ತು ವಿದ್ಯುತ್ ದರ ಏರಿಕೆಯ ವಿರುದ್ಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ, 2 ವರ್ಷಗಳ ಸರಣಿ ಸುಲಿಗೆ! ಯುಗಾದಿ ಹಬ್ಬಕ್ಕೆ ಬೆಲೆ `ಏರಿಕೆ ಹೋಳಿಗೆ!!’ ಎಂದು ಟಾಂಗ್ ನೀಡಿದ್ದಾರೆ.
ಕರ್ನಾಟಕ ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ. ಒಂದು ಕೈಯಲ್ಲಿ ಕೊಟ್ಟು 10 ಕೈಗಳಲ್ಲಿ ಕಿತ್ತುಕೊಳ್ಳುವ ದಶಾವತಾರಿ ರಾವಣರೂಪಿ ಸುಲಿಗೆ ಪ್ರವೃತ್ತಿ ಕನ್ನಡಿಗರ ಪಾಲಿಗೆ ಮರಣಶಾಸನವಾಗಿದೆ ಎಂದರು.
ರಾಜ್ಯದಲ್ಲಿ ಹಾಲಿನ ಹಾಲಾಹಲ ಶುರುವಾಗಿದೆ. 3ನೇ ಸಲ ದರ ಏರಿಕೆ ಮಾಡಲಾಗಿದೆ. ಹಾಗೆಯೇ ವಿದ್ಯುತ್ ಕೂಡ ದುಬಾರಿ ಆಗಿದೆ. ಈಗ ಎಲ್ಲರಿಗೂ ಪ್ರತೀ ಯೂನಿಟ್‌ಗೆ 36 ಪೈಸೆ ಬರೆ. ಮಹಾದೇವಪ್ಪನಿಗೂ ಶಾಕ್! ಕಾಕಾ ಪಾಟೀಲಗೂ ಶಾಕ್ !! ಎಂದು ರಾಜ್ಯ ಸರ್ಕಾರದ ಬಗ್ಗೆ ಕೇಂದ್ರ ಸಚಿವರು ಲೇವಡಿ ಮಾಡಿದ್ದಾರೆ.