ಹೊಸದಿಗಂತ ವರದಿ ಶಿವಮೊಗ್ಗ :
ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಮತ್ತು ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ವತಿಯಿಂದ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು ಮತ್ತು ರಾಜ್ಯ ಸರ್ಕಾರ ದ ರೈತ ವಿರೋಧಿ ಕೃಷಿ ಕಾಯಿದೆಗಳ ರದ್ದತಿಗೆ ಆಗ್ರಹಿಸಿ ನ.26 ರಿಂದ 28 ಬೆಂಗಳೂರಿನ ಫ್ರೀಡಮ್ ಪಾರ್ಕ್ ನಲ್ಲಿ ಮಹಾಧರಣಿ ಹಮ್ಮಿಕೊಳ್ಳಲಾಗಿದ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಎಚ್. ಆರ್. ಬಸವರಾಜಪ್ಪ ತಿಳಿಸಿದರು.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಚುನಾವಣಾ ಪ್ರಣಾಳಿಕೆಯಲ್ಲಿನೀಡಿದ ಭರವಸೆಯಂತೆ ಕೇಂದ್ರ ಬಿಜೆಪಿ ಸರ್ಕಾರ ನಡೆದುಕೊಳ್ಳುತ್ತಿಲ್ಲ. ಡಾ. ಸ್ವಾಮಿನಾಥನ್ ವರದಿಯಂತೆ ರೈತರಿಗೆ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ನೀಡುವಲ್ಲಿ ವಿಫಲವಾಗಿದೆ. ವಿದ್ಯುತ್ ಕ್ಷೇತ್ರ ಖಾಸಗೀಕರಣ ಮಾಡುವುದನ್ನು ನಿಲ್ಲಿಸಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇಸುವಂತೆ ಆಗ್ರಹಿಸಲಾಗುತ್ತದೆ ಎಂದರು.
ಕಾಂಗ್ರೆಸ್ ಕೂಡ ರೈತ ವಿರೋಧಿ ಕೃಷಿ ಕಾಯಿದೆಗಳನ್ನು ವಾಪಸ್ ಪಡೆಯುವುದಾಗಿ ಹೇಳಿತ್ತು. ಆದರೆ ಪಡೆದಿಲ್ಲ. ಐಪಿ ಸೆಟ್ ಗಳ ಸಂಪರ್ಕ ಪಡೆಯುವವರು ತಾವೇ ಎಲ್ಲಾ ಬೆಚ್ಚವನ್ಮು ಭರಿಸಿಕೊಳ್ಳಬೇಕೆಂಬ ನಿಯಮ ಜಾರಿಗೆ ತರಲು ಮುಂದಾಗಿದ್ದು, ಇದನ್ನುವಾಪಸ್ಪಡೆಯುವಂತೆ ಆಗ್ರಹಿಸಲಾಗುತ್ತದೆ ಎಂದರು.
ಕೊನೆಯದಿನ ರಾಜ್ಯಪಾಲರಿಗೆ ಮನವಿ ನೀಡಲು ಕೋರಲಾಗಿದೆ. ಅದಕ್ಕೆ ಅವಕಾಶ ನೀಡದಿದ್ದರೆ ರಾಜ್ಯಭವನ ಮುತ್ತಿಗೆ ಹಾಕಲಾಗುತ್ತದೆ ಎಂದರು.