ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದಲ್ಲಿ ಮಹಾಘಟ್ ಬಂಧನ್ ನೇತೃತ್ವದ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನರೇಂದ್ರ ಮೋದಿ ಸರ್ಕಾರ ತಂದಿರುವ ವಕ್ಫ್ ಕಾಯ್ದೆಯನ್ನು ಕಸದ ಬುಟ್ಟಿಗೆ ಎಸೆಯುತ್ತೇವೆ ಎಂದು ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಭಾನುವಾರ ಹೇಳಿದ್ದಾರೆ.
ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆದ ‘ವಕ್ಫ್ ಉಳಿಸಿ, ಸಂವಿಧಾನ ಉಳಿಸಿ’ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ತೇಜಸ್ವಿ ಯಾದವ್, ಆರ್‌ಜೆಡಿ ಈ ಕಾನೂನನ್ನು ವಿರೋಧಿಸುತ್ತದೆ ಎಂದು ನಮ್ಮ ರಾಷ್ಟ್ರೀಯ ಅಧ್ಯಕ್ಷ ಲಾಲು ಪ್ರಸಾದ್ ಸ್ಪಷ್ಟಪಡಿಸಿದ್ದಾರೆ. ಸಂಸತ್ತಿನ ಉಭಯ ಸದನಗಳಲ್ಲಿ ನಮ್ಮ ಸಂಸದರು ಇದನ್ನು ವಿರೋಧಿಸಿದ್ದು, ಕಾಯ್ದೆ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದೇವೆ ಎಂದು ತಿಳಿಸಿದರು.
ಬಿಹಾರದಲ್ಲಿ ಎನ್‌ಡಿಎ ಸರ್ಕಾರ ತೊಲಗುವ ಹಾದಿಯಲ್ಲಿದೆ ಎಂಬುದನ್ನು ರಾಜ್ಯದ ಮುಸ್ಲಿಂ ಸಹೋದರರಿಗೆ ಹೇಳುತ್ತೇನೆ. ನವೆಂಬರ್‌ನಲ್ಲಿ ರಾಜ್ಯದಲ್ಲಿ ಹೊಸ ಬಡವರ ಪರ ಸರ್ಕಾರವನ್ನು ಸ್ಥಾಪಿಸಲಾಗುವುದು. ಅದು ವಕ್ಫ್ ಕಾಯ್ದೆಯನ್ನು ಕಸದ ಬುಟ್ಟಿಗೆ ಹಾಕಲಿದೆ ಎಂದು ಹೇಳಿದರು.