ಮಹಾಕಾಳೇಶ್ವರ ದೇವಾಲಯದ ಗೋಡೆ ಕುಸಿತ: ಇಬ್ಬರು ಸಾವು, ಹಲವರು ಸಿಲುಕಿರುವ ಶಂಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎಡೆಬಿಡದೆ ಸುರಿಯುತ್ತಿರುವ ಮಳೆಯ ನಡುವೆ ಉಜ್ಜಯಿನಿಯ ಮಹಾಕಾಲ್ ದೇವಾಲಯದ ಗಡಿ ಗೋಡೆ ಕುಸಿದಿದೆ. ಗೋಡೆ ಕುಸಿದು ಇಬ್ಬರು ಸಾವನ್ನಪ್ಪಿದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಗಾಯಾಳುಗಳಲ್ಲಿ ಕೆಲವರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಅವಶೇಷಗಳಡಿ ಸಿಲುಕಿರುವವರ ನಿಖರ ಸಂಖ್ಯೆ ಇನ್ನೂ ದೃಢಪಟ್ಟಿಲ್ಲ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಅವಶೇಷಗಳಡಿ ಸುಮಾರು 12 ಮಂದಿ ಸಿಲುಕಿದ್ದಾರೆ ಎಂದು ಅಂದಾಜಿಸಲಾಗಿದೆ. ಇದುವರೆಗೆ ಕನಿಷ್ಠ ನಾಲ್ವರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಉಜ್ಜಯಿನಿ ಡಿಎಂ ನೀರಜ್ ಕುಮಾರ್ ಸಿಂಗ್ ಅವರು ಗೋಡೆ ಕುಸಿತದ ಕುರಿತು ಮಾತನಾಡುತ್ತಾ, ಭಾರೀ ನೀರಿನ ಹರಿವಿನಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಿದರು. ಗೋಡೆ ಕುಸಿತದಲ್ಲಿ ಓರ್ವ ಪುರುಷ ಮತ್ತು ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಅವರು ಖಚಿತಪಡಿಸಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!