ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದಲ್ಲಿ ಸಂಸ್ಕೃತಿಯ ಮಹಾ ಕುಂಭಮೇಳ ನಡೆಯುತ್ತಿದೆ. ಇಲ್ಲಿ ಬೆಂಗಳೂರಿನಲ್ಲಿ ತಂತ್ರಜ್ಞಾನ ಹಾಗೂ ಯುದ್ಧೋಪಕರಣಗಳ, ಯುದ್ಧ ವಿಮಾನಗಳ ಮಹಾ ಕುಂಭ ನಡೆಯುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು. ಯಲಹಂಕ ವಾಯುನೆಲೆಯಲ್ಲಿ ನಾಲ್ಕು ದಿನಗಳ ಕಾಲ ನಡೆಯುವ ಏರೋ ಇಂಡಿಯಾ 2025ರ ವೈಮಾನಿಕ ಪ್ರದರ್ಶನದ ಉದ್ಘಾಟನೆ ನೆರವೇರಿಸಿ ಸೋಮವಾರ ಅವರು ಮಾತನಾಡಿದರು.
ಹೊಸ ಸವಾಲುಗಳಿಗೆ ಉತ್ತರ ಹುಡುಕುವ ಕಾರ್ಯ ಮಾಡಬೇಕಿದೆ. ಶಾಂತಿ, ಶಕ್ತಿ ನಮ್ಮ ಮಂತ್ರ ಬಲ ಆಗಬೇಕಿದೆ. ನಾವು ಬಲಾಢ್ಯರಾಗಿ ವಿಶ್ವದಲ್ಲಿ ನಮ್ಮ ಸ್ಥಾನ ಪ್ರದರ್ಶನ ಮಾಡಬೇಕಿದೆ. ಅತ್ಯಾಧುನಿಕ ಅನ್ವೇಷಣೆ ಮೂಲಕ ನಾವು ಮುಂದೆ ಹೆಜ್ಜೆ ಇಟ್ಟಿದ್ದೇವೆ ಏರ್ಶೋ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇವೆ. 10 ವರ್ಷಗಳಿಂದ ವೈಮಾನಿಕ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿದ್ದೇವೆ. ಬಜೆಟ್ನಲ್ಲಿ ರಕ್ಷಣಾ ಕ್ಷೇತ್ರಕ್ಕೆ 1,080 ಲಕ್ಷ ಕೋಟಿ ರೂ. ಮೀಸಲಿಟ್ಟಿದ್ದೇವೆ ಎಂದು ಅವರು ತಿಳಿಸಿದರು.
ಬೆಂಗಳೂರು ಇನ್ನೋವೇಷನ್ ಹಬ್, ಸಾಫ್ಟ್ವೇರ್ನ ಹೆಗ್ಗಳಿಕೆ ಹೊಂದಿರುವ ನಗರ. ಏರೋಸ್ಪೇಸ್ ಮೂಲಕವೂ ಬೆಂಗಳೂರು ಹೆಸರುವಾಸಿಯಾಗುತ್ತಿದೆ ಎಂದು ರಾಜನಾಥ್ ಸಿಂಗ್ ಹೇಳಿದರು.