ಹೊಸದಿಗಂತ ಡಿಜಿಟಲ್ ಡೆಸ್ಕ್:
144 ವರ್ಷಕ್ಕೊಮ್ಮೆ ಬರುವ ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆದ ಮಹಾಕುಂಭ ಮೇಳಕ್ಕೆ ಇಂದು ವಿದ್ಯುಕ್ತ ತೆರೆ ಬಿದ್ದಿದೆ. ಜಗತ್ತಿನ ಅತಿದೊಡ್ಡ ಧಾರ್ಮಿಕ ಉತ್ಸವದಲ್ಲಿ 65 ಕೋಟಿಗೂ ಹೆಚ್ಚು ಭಕ್ತರು ಪುಣ್ಯ ಸ್ನಾನ ಮಾಡಿ ವಿಶ್ವ ದಾಖಲೆ ಬರೆದಿದ್ದಾರೆ.
ಮಹಾಶಿವರಾತ್ರಿಯ ಹಿನ್ನೆಲೆ ಇಂದು ನಡೆದ ಕೊನೆಯ ಪವಿತ್ರ ಸ್ನಾನದಲ್ಲಿ ಒಂದು ಕೋಟಿಗೂ ಅಧಿಕ ಜನರು ಭಾಗಿಯಾಗಿ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದು ಪುನೀತರಾಗಿದ್ದಾರೆ.
ಅಮೃತಸ್ನಾನ ಮಾಡಲು ಬಂದಿದ್ದ ಭಕ್ತರ ಮೇಲೆ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ ಸುರಿಸಲಾಯ್ತು. ಸಿಎಂ ಯೋಗಿ ಆದಿತ್ಯನಾಥ್ ಗೋರಖ್‌ಪುರದ ವಾರ್ ರೂಂನಲ್ಲಿ ಕುಳಿತು ಇಂದು ಇಡೀ ದಿನ ಮಹಾಕುಂಭಮೇಳವನ್ನು ವೀಕ್ಷಿಸಿದ್ದಾರೆ.