ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯಲಿರುವ ಮಹಾಕುಂಭ-2025ಕ್ಕೆ ವಿಶೇಷವಾಗಿ ಸಂಯೋಜನೆ ಮಾಡಿರುವ ಹಾಡೊಂದನ್ನು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಇಂದು ಲೋಕಾರ್ಪಣೆಗೊಳಿಸಿದರು.
ಆಲ್ ಇಂಡಿಯಾ ರೇಡಿಯೋ ಮತ್ತು ದೂರದರ್ಶನ ಸಂಯೋಜನೆ ಮಾಡಿರುವ ಹಾಡು ಇದಾಗಿದೆ. ಈ ಹಾಡು ಪ್ರಯಾಗ್‌ರಾಜ್‌ನಲ್ಲಿರುವ ಪವಿತ್ರ ತ್ರಿವೇಣಿ ಸಂಗಮದಲ್ಲಿ ನಡೆಯುವ ಮಹಾಕುಂಭದ ವೈಭವಕ್ಕೆ ನೀಡುವ ಗೌರವವಾಗಿದೆ.
ಈ ಬಾರಿ ಮಹಾಕುಂಭಕ್ಕೆ 45 ಕೋಟಿ ಭಕ್ತರು ಬರುವ ನಿರೀಕ್ಷೆ ಇದೆ. ಜನವರಿ 13ರಿಂದ ಫೆಬ್ರವರಿ 26ರವರೆಗೆ ಪ್ರಯಾಗರಾಜ್‌ನಲ್ಲಿ ಮಹಾ ಕುಂಭ ನಡೆಯಲಿದೆ.