ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಯಾಗ್‌ರಾಜ್ ಮಹಾಕುಂಭಮೇಳ ಹೊಸ ದಾಖಲೆಯನ್ನ ಬರೆದಿದೆ. ಮಹಾಕುಂಭಮೇಳದಲ್ಲಿ ಇದುವರೆಗೆ 8 ಕೋಟಿ 80 ಲಕ್ಷ ಭಕ್ತರು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದ್ದಾರೆ.
ಕಳೆದ 8 ದಿನಗಳಲ್ಲಿ ನಿತ್ಯ ಸರಾಸರಿ 1 ಕೋಟಿಗೂ ಹೆಚ್ಚು ಭಕ್ತರು ಸ್ನಾನ ಮಾಡಿದಂತಾಗಿದೆ. ಜನವರಿ 29ರ ಮೌನಿ ಅಮಾವಾಸ್ಯೆಯಂದು ಒಂದೇ ದಿನ 8-9 ಕೋಟಿ ಭಕ್ತರು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡುವ ನಿರೀಕ್ಷೆ ಇದೆ.
45 ದಿನಗಳಲ್ಲಿ 40 ಕೋಟಿಗೂ ಹೆಚ್ಚು ಜನರು ಪ್ರಯಾಗ್‌ರಾಜ್‌ಗೆ ಭೇಟಿ ನೀಡುತ್ತಿದ್ದಾರೆ.
ಫಿಫಾ ವರ್ಲ್ಡ್ ಕಪ್ ನೋಡಲು ಸೇರುವ ಜನರಿಗಿಂತ ಹೆಚ್ಚು ಜನರು ಮಹಾಕುಂಭಮೇಳಕ್ಕೆ ಸೇರುತ್ತಿದ್ದಾರೆ. ಹೀಗಾಗಿ ಮಹಾಕುಂಭಮೇಳ ಭೂಮಿಯ ಮೇಲೆ ಹೆಚ್ಚಿನ ಜನರು ಒಂದೆಡೆ ಸೇರುವ ಸ್ಥಳವೂ ಆಗಿದೆ.