ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾಲಕ್ಷ್ಮಿ ಹತ್ಯೆ ಪ್ರಕರಣದಲ್ಲಿ ಕೊಲೆಗಾರ ಯಾರೆಂದು ಗೊತ್ತಾಗಿದೆ, ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಹೇಳಿಕೆ ನೀಡಿದ್ದಾರೆ.
ಘಟನೆಯ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೃತ್ಯವೆಸಗಿರುವ ವ್ಯಕಿ ಯಾರೆಂದು ಗೊತ್ತಾಗಿದೆ. ಆರೋಪಿ ಹೊರ ರಾಜ್ಯದವನಾಗಿದ್ದು ಬೆಂಗಳೂರಿನಲ್ಲಿ ವಾಸವಾಗಿದ್ದ. ಆತನನ್ನು ಬಂಧನ ಮಾಡಿ ವಿಚಾರಣೆಗೆ ಒಳಪಡಿಸುತ್ತೇವೆ ನಂತರ ಉಳಿದ ವಿಚಾರಗಳ ಬಗ್ಗೆ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದ್ದಾರೆ.