ಚಾಮುಂಡಿ ಬೆಟ್ಟದಲ್ಲಿ ನಂದಿ ವಿಗ್ರಹಕ್ಕೆ ಮಹಾಮಸ್ತಕಾಭಿಷೇಕ : ನೂರಾರು ಭಕ್ತರು ಭಾಗಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ದೇಶದ ಮೂರನೇ ಅತೀ ದೊಡ್ಡ ನಂದಿ ವಿಗ್ರಹಕ್ಕೆ ಇಂದು ಮಹಾಮಸ್ತಾಭಿಷೇಕ ನೆರವೇರಿಸಲಾಯಿತು.

ಭಾರತದ ಮೂರನೇ ಅತಿದೊಡ್ಡ ನಂದಿ ವಿಗ್ರಹ ಎಂಬ ಖ್ಯಾತಿ ಪಡೆದಿರುವ ಚಾಮುಂಡಿ ಬೆಟ್ಟದ ನಂದಿಗೆ ಇಂದು ಮಹಾಮಸ್ತಾಭಿಷೇಕ ನೆರವೇರಿದ್ದು, ಚಾಮುಂಡಿ ಬೆಟ್ಟ ಬಳಗ ಚಾರಿಟಬಲ್‌ ಟ್ರಸ್ಟ್‌ನಿಂದ ಇಂದು 19ನೇ ವರ್ಷದ ಮಹಾಮಸ್ತಾಭಿಷೇಕ ನೆರವೇರಿಸಿದೆ. ಮಹಾಮಸ್ತಕಾಭಿಷೇಕವನ್ನು ಕಣ್ತುಂಬಿಕೊಳ್ಳಲು ನೂರಾರು ಭಕ್ತರು ಆಗಮಿಸಿದ್ದಾರೆ.

ಅಭಿಷೇಕದಲ್ಲಿ ನಂದಿ ವಿಗ್ರಹಕ್ಕೆ 34 ಬಗೆಯ ದ್ರವ್ಯಗಳು ಸೇರಿದಂತೆ 38 ವಿಧಗಳಲ್ಲಿ ಅಭಿಷೇಕ ನೆರವೇರಿಸಲಾಯಿತು. ಈ ನಂದಿ ವಿಗ್ರಹವು 1659 ರಿಂದ 1673ರವರೆಗೆ ಮೈಸೂರು ಸಂಸ್ಥಾನವನ್ನಾಳಿದ ದೊಡ್ಡ ದೇವರಾಜ ಒಡೆಯರ್‌ ಕಾಲದಲ್ಲಿ ನಿರ್ಮಾಣವಾಗಿದ್ದು, 350ಕ್ಕೂ ಅಧಿಕ ವರ್ಷಗಳ ಇತಿಹಾಸ ಹೊಂದಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!