ಹೊಸದಿಗಂತ ಡಿಜಿಟಲ್ ಡೆಸ್ಕ್:
ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ರೈಲ್ವೆ ನಿಲ್ದಾಣದೊಳಕ್ಕೆ ಕಾರು ನುಗ್ಗಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಟೇಕಲ್ ರೈಲ್ವೆ ನಿಲ್ದಾಣದಲ್ಲಿ ತಡರಾತ್ರಿ ಘಟನೆ ಈ ಸಂಭವಿಸಿದೆ. ಪರಿಣಾಮವಾಗಿ ಕಾರು ಮತ್ತು ರೈಲ್ವೆ ಹಳಿಗೆ ಡ್ಯಾಮೇಜ್ ಆಗಿದೆ.
ರಾಕೇಶ್ ಎಂಬಾತ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಈ ಅವಾಂತರ ಸೃಷ್ಟಿಸಿದ್ದಾನೆ. ರೈಲ್ವೆ ಪೊಲೀಸರು ಜೆಸಿಬಿ ಸಹಾಯದಿಂದ ಕಾರು ತೆರವುಗೊಳಿಸಿದ್ದಾರೆ.
ಈ ಸಂಬಂಧ ಬಂಗಾರಪೇಟೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.