ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಜಿತ್ ಪವಾರ್ ಅವರ ಅಂತ್ಯಕ್ರಿಯೆಯನ್ನು ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುತ್ತದೆ ಎಂಬುದಾಗಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಿಳಿಸಿದ್ದಾರೆ.
ಈ ಸುದ್ದಿ “ಹೃದಯ ವಿದ್ರಾವಕ” ಎಂದು ಕರೆದ ಫಡ್ನವೀಸ್, ಅಜಿತ್ ದಾದಾ ಅವರನ್ನು ಜನರೊಂದಿಗೆ ಬಲವಾದ ಸಂಪರ್ಕ ಹೊಂದಿರುವ ಜನ ನಾಯಕ ಮತ್ತು ವಿಶಾಲ ಹೃದಯದ ಧೈರ್ಯಶಾಲಿ ಸ್ನೇಹಿತ ಎಂದು ಬಣ್ಣಿಸಿದರು.
ಇದೇ ಸಂದರ್ಭದಲ್ಲಿ ನಾಳೆ ಅಜಿತ್ ಪವಾರ್ ಅವರ ಅಂತ್ಯಕ್ರಿಯೆಯನ್ನು ಬೆಳಗ್ಗೆ 11 ಗಂಟೆಗೆ ನಡೆಸಲಾಗುತ್ತದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸುವುದಾಗಿ ಅವರು ತಿಳಿಸಿದ್ದಾರೆ.



