ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಜೆಪಿಯ ‘ಸಂಕಲ್ಪ ಪತ್ರ’ವನ್ನು ಬಿಡುಗಡೆ ಮಾಡಿದ್ದಾರೆ.
ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ರಾಜ್ಯ ಬಿಜೆಪಿ ಅಧ್ಯಕ್ಷ ಚಂದ್ರಶೇಖರ್ ಬವಾಂಕುಲೆ, ಮುಂಬೈ ಬಿಜೆಪಿ ಅಧ್ಯಕ್ಷ ಆಶಿಶ್ ಶೆಲಾರ್, ಕೇಂದ್ರ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ಪಕ್ಷದ ನಾಯಕರು ಪ್ರಣಾಳಿಕೆ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಬಿಜೆಪಿಯು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ ಜೊತೆಗೆ ಮಹಾಯುತಿ ಮೈತ್ರಿಯಾಗಿ ಚುನಾವಣೆಯನ್ನು ಎದುರಿಸುತ್ತಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಅಮಿತ್ ಶಾ, ರೈತರು, ಮಹಿಳೆಯರು ಮತ್ತು ಬಡವರ ಕಲ್ಯಾಣವನ್ನು ಖಾತ್ರಿಪಡಿಸುವ ಆಡಳಿತ ಮೈತ್ರಿ ಬದ್ಧತೆಯನ್ನು ಎತ್ತಿ ತೋರಿಸಿದರು.
“ಮಹಾಯುತಿ ಸರ್ಕಾರವು ರೈತರ ಗೌರವಕ್ಕಾಗಿ, ಬಡವರಿಗೆ ಸಹಾಯ ಮಾಡುವ ಮತ್ತು ಮಹಿಳೆಯರ ಸ್ವಾಭಿಮಾನವನ್ನು ಎತ್ತಿಹಿಡಿಯುವ ಬಗ್ಗೆ ಅಮಿತ್ ಶಾ ಮಾತನಾಡಿದರು. ಇಂದು ಬಿಡುಗಡೆಯಾದ ‘ಸಂಕಲ್ಪ ಪತ್ರ’ ಮಹಾರಾಷ್ಟ್ರದ ಜನರ ಆಕಾಂಕ್ಷೆಗಳ ಪ್ರತಿಬಿಂಬವಾಗಿದೆ ಎಂದು ತಿಳಿಸಿದರು.