ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ವಿರೋಧ ಪಕ್ಷಗಳ ಮೈತ್ರಿಕೂಟ ಮಹಾ ವಿಕಾಸ್ ಅಘಾಡಿ ತನ್ನ ಪ್ರಚಾರವನ್ನು ನವೆಂಬರ್ 6 ರಂದು ಪ್ರಾರಂಭಿಸಲಿದೆ ಎಂದು ಎನ್‌ಸಿಪಿ(ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಅವರು ಗುರುವಾರ ಹೇಳಿದ್ದಾರೆ.
ನವೆಂಬರ್ 6 ರಂದು ಎಂವಿಎ ಚುನಾವಣಾ ಪ್ರಚಾರಕ್ಕೆ ನಾನು ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಶಿವಸೇನೆ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಚಾಲನೆ ನೀಡಲಿದ್ದೇವೆ ಎಂದು ತಿಳಿಸಿದರು.
ಇಂದು ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶರದ್ ಪವಾರ್ ಅವರು, ಜನತೆಗೆ ದೀಪಾವಳಿ ಶುಭಾಶಯಗಳನ್ನು ತಿಳಿಸಿದರು ಮತ್ತು ರಾಜ್ಯದ ಜನರ ಸಮೃದ್ಧಿ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುವುದಾಗಿ ಹೇಳಿದರು.
ಕೆಲವು ಕ್ಷೇತ್ರಗಳಲ್ಲಿ ಎಂವಿಎ ಪಾಲುದಾರರಾದ ಎನ್‌ಸಿಪಿ(ಎಸ್‌ಪಿ), ಕಾಂಗ್ರೆಸ್ ಮತ್ತು ಸೇನಾ(ಯುಬಿಟಿ) ನಡುವಿನ ಸೌಹಾರ್ದ ಸ್ಪರ್ಧೆಯ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಮಾಜಿ ಕೇಂದ್ರ ಸಚಿವರು, ಎಂವಿಎಯಿಂದ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ ಕೇವಲ 10-12 ಕ್ಷೇತ್ರಗಳಿಗೆ. ಇನ್ನೆರಡು ದಿನಗಳಲ್ಲಿ ಇದಕ್ಕೂ ಪರಿಹಾರ ಕಂಡುಕೊಂಡು ಸಮಸ್ಯೆ ಬಗೆಹರಿಸುವ ವಿಶ್ವಾಸವಿದೆ ಎಂದರು.
ನ