ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಇಂದು 22 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಬಿಜೆಪಿ ಆರು ಹಾಲಿ ಶಾಸಕರನ್ನು ಉಳಿಸಿಕೊಂಡಿದೆ ಮತ್ತು ಇಬ್ಬರನ್ನು ಕೈಬಿಟ್ಟಿದೆ.
ಎರಡನೇ ಪಟ್ಟಿಯಲ್ಲಿ,ಅಕೋಟ್, ನಾಸಿಕ್ ಸೆಂಟ್ರಲ್, ಪೆನ್, ಖಡಕ್ವಾಸಲಾ, ಪುಣೆ ಕಂಟೋನ್ಮೆಂಟ್ ಮತ್ತು ಉಲ್ಲಾಸನಗರದ ಶಾಸಕರನ್ನು ಉಳಿಸಿಕೊಂಡು ವಾಶಿಮ್ ಮತ್ತು ಗಡ್ಚಿರೋಲಿಯ ಹಾಲಿ ಶಾಸಕರನ್ನು ಬದಲಾಯಿಸಿದೆ.
ಜಾಟ್‌ನಿಂದ ಗೋಪಿಚಂದ್ ಪಡಲ್ಕರ್ ಮತ್ತು ಲಾತೂರ್ ಗ್ರಾಮಾಂತರದಿಂದ ರಮೇಶ್ ಕರದ್ ಅವರನ್ನು ಕಣಕ್ಕಿಳಿಸಲಾಗಿದೆ.
ನವೆಂಬರ್ 20 ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ 99 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿತ್ತು.