ಮುಂದಿನ 15 – 20 ದಿನಗಳಲ್ಲಿ ಮಹಾರಾಷ್ಟ್ರ ಸರ್ಕಾರ ಪತನ: ಡೆತ್ ವಾರಂಟ್ ನೀಡಿದ ಸಂಜಯ್ ರಾವತ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮುಂದಿನ 15 – 20 ದಿನಗಳಲ್ಲಿ ಮಹಾರಾಷ್ಟ್ರ ಸರ್ಕಾರ ಪತನಗೊಳ್ಳಲಿದೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್ (Sanjay Raut) ಭವಿಷ್ಯ ನುಡಿದಿದ್ದಾರೆ .

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದ್ಧವ್ ಠಾಕ್ರೆ (Uddhav Thackeray) ನಾಯಕತ್ವದ ವಿರುದ್ಧ ಬಂಡಾಯವೆದ್ದ 16 ಶಿವಸೇನೆಯ (ಶಿಂಧೆ ಪಕ್ಷ) ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ಸುಪ್ರೀಂ ಕೋರ್ಟ್‍ನಲ್ಲಿ ಬಾಕಿ ಉಳಿದಿದೆ. ತಮ್ಮ ಪಕ್ಷವು ನ್ಯಾಯಾಲಯದ ಆದೇಶಕ್ಕಾಗಿ ಕಾಯುತ್ತಿದೆ. ಜೊತೆಗೆ ನಮಗೆ ನ್ಯಾಯ ಸಿಗುತ್ತದೆ ಎಂಬ ವಿಶ್ವಾಸವಿದ್ದು, ಈ ಹಿನ್ನೆಲೆಯಲ್ಲಿ ನಿರೀಕ್ಷಿಸುತ್ತಿದ್ದೇವೆ ಎಂದು ಹೇಳಿದರು.

ಇದರಿಂದ 15-20 ದಿನಗಳಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ಮತ್ತು ಅವರ 40 ಶಾಸಕರ ಸರ್ಕಾರ ಪತನವಾಗಲಿದೆ. ಈ ಸರ್ಕಾರದ ಡೆತ್ ವಾರಂಟ್ ಹೊರಡಿಸಲಾಗಿದೆ. ಇದಕ್ಕೆ ಯಾರು ಸಹಿ ಹಾಕುತ್ತಾರೆ ಎಂಬುದು ಈಗ ನಿರ್ಧಾರವಾಗಬೇಕಿದೆ ಎಂದು ತಿಳಿಸಿದರು.

ಕಳೆದ ವರ್ಷ ಜೂನ್‍ನಲ್ಲಿ ಶಿಂಧೆ ಹಾಗೂ 39 ಶಾಸಕರು ಶಿವಸೇನಾ (Shiv Sena) ನಾಯಕತ್ವದ ವಿರುದ್ಧ ಬಂಡಾಯವೆದ್ದಿದ್ದರು. ಇದರ ಪರಿಣಾಮವಾಗಿ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರ ಪಕ್ಷವು ವಿಭಜನೆಯಾಗಿ ಪತನಕ್ಕೆ ಕಾರಣವಾಯಿತು. ಇದಾದ ಬಳಿಕ ಶಿಂಧೆ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಬಿಜೆಪಿ ಮೈತ್ರಿ ಮಾಡಿಕೊಂಡರು. 2022ರ ಜೂನ್ 30ರಂದು, ಶಿಂಧೆ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!