ನಾಳೆ ಮಹಾರಾಷ್ಟ್ರ-ಜಾರ್ಖಂಡ್ ಫಲಿತಾಂಶ: ವೀಕ್ಷಕರನ್ನು ನೇಮಿಸಿದ ಕಾಂಗ್ರೆಸ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಲಿದ್ದು, ಈ ಹಿನ್ನೆಲೆ ಕಾಂಗ್ರೆಸ್ ಶುಕ್ರವಾರ ಈ ಎರಡೂ ರಾಜ್ಯಗಳಲ್ಲಿ ಚುನಾವಣೋತ್ತರ ಸನ್ನಿವೇಶಗಳನ್ನು ಮೇಲ್ವಿಚಾರಣೆ ಮಾಡಲು ವೀಕ್ಷಕರನ್ನು ನೇಮಿಸಿದೆ.

ಮಹಾರಾಷ್ಟ್ರ ವೀಕ್ಷಕರಾಗಿ ಅಶೋಕ್ ಗೆಹ್ಲೋಟ್, ಭೂಪೇಶ್ ಬಾಘೇಲ್ ಮತ್ತು ಗೃಹ ಸಚಿವ ಜಿ ಪರಮೇಶ್ವರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಯೋಜಿಸಿದ್ದಾರೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.

ಜಾರ್ಖಂಡ್‌ಗೆ ತಾರಿಕ್ ಅನ್ವರ್, ಮಲ್ಲು ಭಟ್ಟಿ ವಿಕ್ರಮಾರ್ಕ ಮತ್ತು ಕೃಷ್ಣ ಅಲ್ಲವೂರು ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ.

ಹಲವು ಎಕ್ಸಿಟ್ ಪೋಲ್‌ಗಳು ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿವೆ. ಆದರೆ ಕೆಲವೇ ಕೆಲವು ಎಕ್ಸಿಟ್ ಪೋಲ್ ಗಳು ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷವಾದ ಮಹಾ ವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿವೆ.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತಕ್ಕೆ 145 ಸದಸ್ಯರ ಅಗತ್ಯ ಇದ್ದು, 81 ಸದಸ್ಯ ಬಲದ ಜಾರ್ಖಂಡ್ ವಿಧಾನಸಭೆಯಲ್ಲಿ ಬಹುಮತಕ್ಕೆ 41 ಶಾಸಕರ ಅಗತ್ಯ ಇದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!