ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ರನ್ನು ಬಂಧಿಸಿದ ಇಡಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭೂಗತ ಪಾತಕಿ ದಾವೂದ್​ ಇಬ್ರಾಹಿಂ ಮತ್ತು ಅಂಡರ್​ವರ್ಲ್ಡ್​​ನ ಇನ್ನಿತರ ಕೇಸ್​ಗೆ ಸಂಬಂಧಪಟ್ಟಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದ ಬೆನ್ನತ್ತಿರುವ ಜಾರಿ ನಿರ್ದೇಶನಾಲಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಸಿಪಿ ನಾಯಕ ಹಾಗೂ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರನ್ನುಬುಧವಾರ ಬಂಧಿಸಿದೆ.
ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡುತ್ತಿದ್ದ ದಾವೂದ್​ ಇಬ್ರಾಹಿಂ, ಆತನ ಸಹೋದರ ಅನೀಸ್​ ಇಕ್ಬಾಲ್​, ಸಹಾಯಕ ಚೋಟಾ ಶಕೀಲ್​ ಮತ್ತು ಇತರರ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಅಕ್ರಮ ಹಣವರ್ಗಾವಣೆ ಕೇಸ್​ ದಾಖಲಿಸಿರುವ ಇ.ಡಿ., ಅನೇಕ ರಾಜಕಾರಣ ಮೇಲೆ ಕಣ್ಗಾವಲು ಇಟ್ಟಿತ್ತು.
ಕಳೆದ ವಾರ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನಲ್ಲಿರುವ ದಾವೂದ್ ಇಬ್ರಾಹಿಂ ಸಹೋದರಿ ಹಸೀನಾ ಪರ್ಕರ್ ಅವರ ನಿವಾಸದ ಮೇಲೆ ಇಡಿ ದಾಳಿ ನಡೆಸಿತ್ತು.
ಹಾಗೇ, ನವಾಬ್​ ಮಲಿಕ್​​ರನ್ನು ಇಂದು ಬೆಳಗ್ಗೆ 8ಗಂಟೆಯಿಂದ ಇ.ಡಿ.ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು.ಇದೀಗ, ಆರು ಗಂಟೆಗಳ ವಿಚಾರಣೆಯ ನಂತರ, ನವಾಬ್ ಮಲಿಕ್ ಅವರನ್ನು ಇಡಿ ಬಂಧಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!