ದಾವೂದ್ ಇಬ್ರಾಹಿಂ ಜೊತೆ ನಂಟು ಆರೋಪ: ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಇಡಿ ಅವಧಿ ಮಾ.7ರವರೆಗೆ ವಿಸ್ತರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರ ಸಚಿವ ಮತ್ತು ಎನ್ ಸಿಪಿ ನಾಯಕ ನವಾಬ್ ಮಲಿಕ್ ಅವರ ಜಾರಿ ನಿರ್ದೇಶನಾಲಯದ ಕಸ್ಟಡಿಯನ್ನು ಮಾರ್ಚ್ 7ರವರೆಗೆ ವಿಸ್ತರಿಸಿ ಎಂದು ಮುಂಬೈವಿಶೇಷ ಪಿಎಂಎಲ್ ಎ ನ್ಯಾಯಾಲಯವು ಆದೇಶಿಸಿದೆ.
ಭೂಗತ ಪಾತಕಿ ದಾವೂದ್ ಇಬ್ರಾಹಿಂ ನ ಕುಟುಂಬ ಸದಸ್ಯರೊಂದಿಗೆ ಆಸ್ತಿ ವ್ಯವಹಾರ ನಡೆಸಿದ ಆರೋಪದ ಮೇಲೆ ಇಡಿ ಫೆಬ್ರವರಿ 23ರಂದು ಮಹಾರಾಷ್ಟ್ರದ ಸಚಿವ, ಎನ್ ಸಿ ಪಿ ನಾಯಕ ನವಾಬ್ ಮಲ್ಲಿಕ್ ಅವರನ್ನು ಬಂಧಿಸಿತ್ತು.
ಈ ವೇಳೆ ಕೋರ್ಟ್ ಅವರನ್ನು ಮಾರ್ಚ್ 3ರ ಇಡಿ ಕಸ್ಟಡಿಗೆ ಒಪ್ಪಿಸಿತ್ತು.
ಇಂದು ಅವರ ಇಡಿ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ, ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ವಕೀಲರ ವಾದ ಪ್ರತಿವಾದ ಆಲಿಸಿದ ಕೋರ್ಟ್ ಮಾರ್ಚ್ 7ರವರೆಗೆಕಸ್ಟಡಿ ಅವಧಿಯನ್ನು ವಿಸ್ತರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!