ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ನ್ಯಾಯಾಂಗ ಬಂಧನ ವಿಸ್ತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ನ್ಯಾಯಾಂಗ ಬಂಧನವನ್ನು ಏಪ್ರಿಲ್ 18 ರವರೆಗೆ ವಿಸ್ತರಿಸಿ ಇಲ್ಲಿನ ವಿಶೇಷ ನ್ಯಾಯಾಲಯ ಆದೇಶಿಸಿದೆ.
ದಾವೂದ್ ಇಬ್ರಾಹಿಂ ಮತ್ತು ಆತನ ಸಹಾಯಕರ ಚಟುವಟಿಕೆಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆಯ ತನಿಖೆಯಲ್ಲಿ ಮಲಿಕ್ (62) ಅವರನ್ನು ಫೆಬ್ರವರಿ 23 ರಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು.
ಮಾರ್ಚ್ 7 ರವರೆಗೆ ಎನ್‌ಸಿಪಿ ನಾಯಕ ಇಡಿ ಕಸ್ಟಡಿಯಲ್ಲಿದ್ದರು ಬಳಿಕ ಮಾರ್ಚ್ 21 ರವರೆಗೆ ನ್ಯಾಯಾಂಗ ಬಂಧನದಡಿಯಲ್ಲಿ ಜೈಲಿಗೆ ಕಳುಹಿಸಲಾಯಿತು ಬಳಿಕ ಏಪ್ರಿಲ್ 4 ರವರೆಗೆ ವಿಸ್ತರಿಸಲಾಯಿತು.ಇದೀಗ ಮತ್ತೆ ಏಪ್ರಿಲ್ 18 ರವರೆಗೆ ವಿಸ್ತರಿಸಿ ಕೋರ್ಟ್ ಆದೇಶಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!