ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರ ಸಚಿವ ನವಾಬ್​ ಮಲಿಕ್​ ಗೆ ನ್ಯಾಯಾಂಗ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಜೊತೆ ನಂಟು ಆರೋಪ ಹಾಗು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರದ ಸಚಿವ, ಎನ್​ಸಿಪಿ ನಾಯಕ ನವಾಬ್​ ಮಲಿಕ್​ ಅನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಎಂದು ಮುಂಬೈನ ವಿಶೇಷ ಪಿಎಂಎಲ್​ಎ ನ್ಯಾಯಾಲಯ ಆದೇಶಿಸಿದೆ.
ಫೆ.23ರಂದು ಜಾರಿ ನಿರ್ದೇಶನಾಲಯ (ಇಡಿ ನವಾಬ್​ ಮಲಿಕ್​ ಅವರನ್ನು ಬಂಧಿಸಿ, ವಶದಲ್ಲಿ ಇರಿಸಿಕೊಂಡಿತ್ತು.
ಅಕ್ರಮ ಹಣ ಸಂದಾಯದಲ್ಲಿ ಭೂಗತ ಲೋಕದೊಂದಿಗೆ ಮಲಿಕ್​ ಸಂಪರ್ಕ ಹೊಂದಿರುವ ಶಂಕೆ ಇದ್ದು, ಅಲ್ಲದೇ, ರಿಯಲ್​ ಎಸ್ಟೇಟ್​ ಉದ್ಯಮದಲ್ಲಿ ಬೇನಾಮಿ ಆಸ್ತಿಯನ್ನು ತೊಡಗಿಸಿರುವ ಮಾಹಿತಿ ಲಭ್ಯವಾಗಿದೆ ಎಂದು ಇಡಿ ಮೂಲಗಳು ಹೇಳಿವೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!