ಮಹಾ ಸಿಎಂ ಶಿಂಧೆ, ಫಡ್ನವೀಸ್ ಬಗ್ಗೆ ಅವಹೇಳನಾಕಾರಿ ಪೋಸ್ಟ್ ಹಾಕಿದ್ದ ಪಿಎಚ್‌ಡಿ ವಿದ್ಯಾರ್ಥಿ ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಇತರರ ವಿರುದ್ಧ ಮಾನಹಾನಿಕರ ಟ್ವೀಟ್‌ಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಅಹ್ಮದ್‌ನಗರ ಜಿಲ್ಲೆಯಲ್ಲಿ ಪಿಎಚ್‌ಡಿ ವಿದ್ಯಾರ್ಥಿಯೊಬ್ಬನನ್ನು ಬಂಧಿಸಲಾಗಿದೆ.
ಆರೋಪಿಯನ್ನು ಮುಂಬೈಗೆ ಕರೆತರಲಾಗಿದ್ದು, ಸ್ಥಳೀಯ ನ್ಯಾಯಾಲಯ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಪೊಲೀಸರು ಆತನ ಇನ್ನೂ ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಆಕ್ಷೇಪಾರ್ಹ ಟ್ವೀಟ್‌ಗಳನ್ನು ಪೋಸ್ಟ್ ಮಾಡುವಲ್ಲಿ ಹೆಚ್ಚಿನ ಜನರು ಭಾಗಿಯಾಗಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಗಣೇಶ್ ನಾರಾಯಣ ಗೋಟೆ(29 ವರ್ಷ) ಎಂದು ಗುರುತಿಸಲಾಗಿದೆ. ಈತ ಅಹ್ಮದ್‌ನಗರ ಜಿಲ್ಲೆಯ ರಾಹುರಿಯ ಮಹಾತ್ಮ ಫುಲೆ ಕೃಷಿ ವಿಶ್ವವಿದ್ಯಾಲಯದಿಂದ ಎಂಎಸ್‌ಸಿ ಪದವೀಧರ ಮತ್ತು ಪಿಎಚ್‌ಡಿ ವಿದ್ವಾಂಸರಾಗಿದ್ದಾರೆ.
“ಗಣೇಶ್ ಮಹಾರಾಷ್ಟ್ರದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಸೇರಿದಂತೆ ಸಾಂವಿಧಾನಿಕ ಸ್ಥಾನಗಳನ್ನು ಹೊಂದಿರುವ ಜನರ ಬಗ್ಗೆ ಟ್ವಿಟರ್‌ ನಲ್ಲಿ ಅಸಹ್ಯಕರ ಪೋಸ್ಟ್ ಗಳನ್ನು ಮಾಡುತ್ತಿದ್ದಾನೆ ಎಂದು ಅ. 14 ರಂದು ಮಹಾರಾಷ್ಟ್ರದ ಸೈಬರ್ ಇಲಾಖೆಗೆ ದೂರು ಸಲ್ಲಿಕೆಯಾಗಿತ್ತು.
ಅಕ್ಟೋಬರ್ 11 ರಿಂದ ಆಪಾದಿತ ನಿಂದನೀಯ ಪೋಸ್ಟ್ ಗಳನ್ನು ಮಾಡಲಾಗಿದೆ, ಆತನ ಒಂದು ಟ್ವೀಟ್‌ನಲ್ಲಿ,  “ಗದ್ದರ್ (ದೇಶದ್ರೋಹಿ)” ಎಂಬ ಪದವನ್ನು ಬಳಸಿದ್ದಾನೆ. ಸಾಮಾನ್ಯವಾಗಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯು ಶಿಂಧೆ ನೇತೃತ್ವದ ತನ್ನ ಪ್ರತಿಸ್ಪರ್ಧಿ ಪಕ್ಷವನ್ನು ಹಿಯಾಳಿಸಲು ಈ ಪದವನ್ನು ಬಳಸುತ್ತದೆ. ಗೋಟೆ ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ ಎಂದು ಸೈಬರ್ ಪೊಲೀಸರು ತಿಳಿಸಿದ್ದಾರೆ.
ದೂರಿನ ನಂತರ, ಪೊಲೀಸರು ಐಪಿಸಿ ಸೆಕ್ಷನ್ 153A (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 500 (ಮಾನನಷ್ಟ) ಮತ್ತು 505 (2) (ಸಾರ್ವಜನಿಕರಿಗೆ ಭಯ ಅಥವಾ ಆತಂಕವನ್ನು ಉಂಟುಮಾಡುವ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಐಟಿ ಕಾಯಿದೆಯ ಸೆಕ್ಷನ್ 67 (ಇಲೆಕ್ಟ್ರಾನಿಕ್ ರೂಪದಲ್ಲಿ ಅಶ್ಲೀಲ ವಿಷಯಗಳನ್ನು ಪ್ರಕಟಿಸುವುದು ಅಥವಾ ರವಾನಿಸುವುದು) ಅನ್ನು ಸಹ ಅನ್ವಯಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!