ಮಹಾರಾಷ್ಟ್ರದಲ್ಲಿ ಠಾಕ್ರೆ ಸರ್ಕಾರ ಮರುಸ್ಥಾಪನೆ ಅಸಾಧ್ಯ: ಸುಪ್ರೀಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಶಿವಸೇನೆಯ ಉದ್ಧವ್ ಠಾಕ್ರೆ ಮತ್ತು ಏಕನಾಥ್ ಶಿಂಧೆ ಬಣಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.

ಶಿಂಧೆ ಬಂಡಾಯದ ನಂತರ ಉದ್ಧವ್ ಠಾಕ್ರೆ ನೇತೃತ್ವದ ಮೂರು ಪಕ್ಷಗಳ ಮಹಾ ವಿಕಾಸ್ ಆಘಾಡಿ (ಎಂವಿಎ) ನೇತೃತ್ವದ ಸರ್ಕಾರದ ಪತನಕ್ಕೆ ಕಾರಣವಾದ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದ ಸಲ್ಲಿಸಲಾದ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರಿದ್ದ ಪೀಠ ಇಂದು ವಿಚಾರಣೆ ನಡೆಸಿತ್ತು. ಶಿವಸೇನೆಯಿಂದ ಬಂಡಾಯವೆದ್ದು ಬಿಜೆಪಿ ಸೇರಿದ್ದ ಏಕನಾಥ್​ ಶಿಂಧೆ ಬಣದ 16 ಶಾಸಕರನ್ನು ಅನರ್ಹಗೊಳಿಸಬೇಕೆಂದು ಕೋರಿ ಶಿವಸೇನೆಯ ನಾಯಕ ಹಾಗೂ ಮಾಜಿ ಸಿಎಂ ಉದ್ಧವ್​ ಠಾಕ್ರೆ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ್ದರು. ಇದಕ್ಕೆ ಶಿಂಧೆ ಆಕ್ಷೇಪಿಸಿದ್ದರು.

ಈ ಹಿಂದೆ ಮಹಾರಾಷ್ಟದ ಸರ್ಕಾರದ ಬಿಕ್ಕಟ್ಟಿನ ಕುರಿತು ಸುಪ್ರೀಂ ಕೋರ್ಟ್​ಗೆ ಹಲವು ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಪೀಠ ಮೇ 11 ಕ್ಕೆ ತೀರ್ಪು ಕಾಯ್ದಿರಿಸಿತ್ತು.
ಶಾಸಕರ ಅರ್ಹತೆ ತೀರ್ಪನ್ನು ನ್ಯಾಯಾಲಯ ಎತ್ತಿ ಹಿಡಿದರೆ ಶಿಂಧೆ ಬಣದ ಶಿವಸೇನೆ ಮತ್ತು ಬಿಜೆಪಿ ಸರ್ಕಾರ ಪತನಗೊಳ್ಳಲಿದೆ ಎಂಬ ಅಭಿಪ್ರಾಯ ಕೇಳಿಬಂದಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!