ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ 200ಕ್ಕೂ ಹೆಚ್ಚು ಸ್ಥಾನಗಳಲ್ಲಿ ಭರ್ಜರಿ ಮುನ್ನಡೆ ಸಾಧಿಸಿದೆ.
ಬೆಳಿಗ್ಗೆ 10:30 ರ ಟ್ರೆಂಡ್ ಪ್ರಕಾರ, ಮಹಾಯುತಿ 223 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಮಹಾವಿಕಾಸ್ ಅಘಾಡಿ ಒಕ್ಕೂಟವು 54 ಕ್ಷೇತ್ರಗಳಲ್ಲಿ ಮತ್ತು ಉಳಿದವು 13 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಮಹಾರಾಷ್ಟ್ರದಲ್ಲಿ ಒಟ್ಟು 288 ಕ್ಷೇತ್ರಗಳಿದ್ದು, ಬಹುಮತಕ್ಕೆ 145 ಸ್ಥಾನಗಳ ಅಗತ್ಯವಿದೆ. ಹೆಚ್ಚಿನ ಸಮೀಕ್ಷೆಗಳು ಮಹಾಯುತಿ ಸರ್ಕಾರವು ಅಧಿಕಾರಕ್ಕೆ ಮರಳುತ್ತದೆ ಎಂದು ಭವಿಷ್ಯ ನುಡಿದಿವೆ.