ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ನಾಸಿಕ್ ಬಳಿ ಶಾಲಿಮಾರ್ ಎಲ್‌ಟಿಟಿ ಎಕ್ಸ್‌ಪ್ರೆಸ್‌ನ ಲಗೇಜ್ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ಶನಿವಾರ ಸ್ಪಷ್ಟಪಡಿಸಿದರು. ಬೆಳಗ್ಗೆ 8.43ಕ್ಕೆ ಈ ಘಟನೆ ಸಂಭವಿಸಿದ್ದು, ಪ್ರಯಾಣಿಕರಿರುವ ಬೋಗಿಗಳು ಬೆಂಕಿಗೆ ತುತ್ತಾಗಿಲ್ಲ ಎಂದು ಕೇಂದ್ರ ರೈಲ್ವೇ ಮಾಹಿತಿ ನೀಡಿದೆ.
ಲಗೇಜ್ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ರೈಲಿನಿಂದ ಲಗೇಜ್ ವಿಭಾಗವನ್ನು ಬೇರ್ಪಡಿಸಿದರು. ಹಾಗಾಗಿಯೇ ಪ್ರಯಾಣಿಕರ ಬೋಗಿಗಳಿಗೆ ಯಾವುದೇ ಹಾನಿ ಉಂಟಾಗಿಲ್ಲ ಎಂದು ಕೇಂದ್ರ ರೈಲ್ವೆ ತಿಳಿಸಿದೆ.
ಇಂಜಿನ್ ಪಕ್ಕದಲ್ಲಿದ್ದ ಲಗೇಜ್ ವಿಭಾಗ/ಪಾರ್ಸೆಲ್ ವ್ಯಾನ್ ಅನ್ನು ರೈಲಿನಿಂದ ಬೇರ್ಪಡಿಸಲಾಗಿದೆ ಮತ್ತು ಶೀಘ್ರದಲ್ಲೇ ರೈಲು ಸುರಕ್ಷಿತವಾಗಿ ಪುನರಾರಂಭಗೊಳ್ಳಲಿದೆ ಎಂದು ಕೇಂದ್ರ ರೈಲ್ವೆಯ (ಮುಂಬೈ) ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ (CPRO) ತಿಳಿಸಿದ್ದಾರೆ.
ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.