ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾರ್ಧಾ ಜಿಲ್ಲೆಯ ಭುಗಾಂವ್ ಸ್ಟೀಲ್ ಕಂಪನಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 16 ಕಾರ್ಮಿಕರು ಗಾಯಗೊಂಡಿದ್ದಾರೆ.
ಗಾಯಗೊಂಡ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಮಾಹಿತಿ ಪಡೆದ ಆಡಳಿತ ಮಂಡಳಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.
ವಾರ್ಧಾ ಜಿಲ್ಲೆಯ ಭುಗಾಂವ್ ಸ್ಟೀಲ್ ಕಂಪನಿಯಲ್ಲಿ ಬೆಂಕಿ ಕಾಣಿಸಿಕೊಂಡು 16 ಕಾರ್ಮಿಕರು ಗಾಯಗೊಂಡಿದ್ದಾರೆ. ಎಲ್ಲಾ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ವಿಚಾರಣೆ ನಡೆಸಲಾಗಿದೆ ಎಂದು ವಾರ್ಧಾ ಜಿಲ್ಲಾಧಿಕಾರಿ ರಾಹುಲ್ ಕಾರ್ಡಿಲೆ ಹೇಳಿದ್ದಾರೆ.