ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಅಕೋಲಾದ ಓಲ್ಡ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಸಂಜೆ ಸಣ್ಣ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಹಿಂಸಾತ್ಮಕ ಘರ್ಷಣೆ ಸಂಭವಿಸಿದೆ. ಎರಡು ಗುಂಪುಗಳ ಸದಸ್ಯರು ಪರಸ್ಪರ ಕಲ್ಲು ತೂರಾಟ, ವಾಹನಗಳನ್ನು ಹಾನಿಗೊಳಿಸುವುದು ಮತ್ತು ರಸ್ತೆಗಳಲ್ಲಿ ಗದ್ದಲವನ್ನು ಸೃಷ್ಟಿಸಿರಿವುದು ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ.
ಹಿಂಸಾತ್ಮಕ ಘರ್ಷಣೆಯ ನಂತರ ನಗರದಲ್ಲಿ ಸೆಕ್ಷನ್ 144 ಅನ್ನು ವಿಧಿಸಲಾಗಿದೆ ಎಂದು ಅಕೋಲಾ ಜಿಲ್ಲಾಧಿಕಾರಿ ನೀಮಾ ಅರೋರಾ ಹೇಳಿದ್ದಾರೆ.
ಹಿಂಸಾತ್ಮಕ ಗುಂಪು ಈ ಪ್ರದೇಶದಲ್ಲಿ ಕೆಲವು ವಾಹನಗಳನ್ನು ಜಖಂಗೊಳಿಸಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.
ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಕೋಲಾ ಎಸ್ಪಿ ಸಂದೀಪ್ ಘುಗೆ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಅಕೋಲಾ ನಗರದಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.