Wednesday, February 8, 2023

Latest Posts

‘ಗಡಿ ವಿಚಾರದಲ್ಲಿ ಮಹಾರಾಷ್ಟ್ರದವರು ಅನಗತ್ಯವಾಗಿ ಕ್ಯಾತೆ ತೆಗೆಯುತ್ತಿದ್ದಾರೆ’

ಹೊಸದಿಗಂತ ವರದಿ ಹುಬ್ಬಳ್ಳಿ:

ಬೆಳಗಾವಿಯಲ್ಲಿ ಗಡಿ ವಿಚಾರದಲ್ಲಿ ಮಹಾರಾಷ್ಟ್ರದವರು ಅನಗತ್ಯವಾಗಿ ಕ್ಯಾತೆ ತೆಗೆಯುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆರೋಪಿಸಿದರು.
ಹುಬ್ಬಳ್ಳಿಯ ಬೈರಿದೇವರಕೊಪ್ಪದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕರ್ನಾಟಕದ ಬೆಳಗಾವಿ ಗಡಿ ವಿವಾದ ಸುಪ್ರೀಂ ಕೋರ್ಟ್ ನಲ್ಲಿದ್ದು, ಅದರ ವಿಚಾರಣೆ ನಡೆಯುತ್ತಿದೆ. ಮಹಾರಾಷ್ಟ್ರದವರೇ ಸುಪ್ರೀಂ ಕೋರ್ಟ್ ಗೆ ‌ಮೊದಲು ಹೋಗಿದ್ದು ಆದರೆ ಈಗ ಸುಪ್ರೀಂ ಕೋರ್ಟ್ ನಲ್ಲಿ ಇತ್ಯರ್ಥವಾಗಬೇಕು. ಅದು ಆಗುವ ಮುನ್ನವೇ ಜಗಳ ಮಾಡಿಕೊಂಡು ವಿನಾಕಾರಣ ಗೊಂದಲ ಸೃಷ್ಟಿ ಮಾಡುವುದು ಸರಿಯಲ್ಲ. ಸುಪ್ರೀಂ ಕೋರ್ಟ್ ನಲ್ಲಿ ಅದು ಪೈನಲ್ ಇತ್ಯರ್ಥ ಆಗಬೇಕು ಆಮೇಲೆ ಆ ಬಗ್ಗೆ ಸಹ ಮಾತನಾಡಲಿ ಎಂದ ಅವರು, ಎಂಇಎಸ್ ನವರನ್ನ ಬಿಟ್ಟು ರಾಜಕೀಯ ಉದ್ದೇಶಕ್ಕೆ ಗಡಿ ವಿವಾದ ಬಳಸಿಕೊಳ್ಳಲು ಪ್ರಯತ್ನ ಮಾಡಲುಮುಂದಾಗಿದ್ದು ಇದು ಸರಿಯಲ್ಲ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!