Tuesday, March 28, 2023

Latest Posts

ಮಹಾರಾಷ್ಟ್ರ ಸರ್ಕಾರಿ ಉದ್ಯೋಗಗಳಿಗೆ ಗರಿಷ್ಠ ವಯೋಮಿತಿ 2 ವರ್ಷಗಳಿಗೆ ಹೆಚ್ಚಳ

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಸರ್ಕಾರಿ ಉದ್ಯೋಗಗಳ ಗರಿಷ್ಠ ವಯೋಮಿತಿಯನ್ನು ಎರಡು ವರ್ಷಗಳವರೆಗೆ ಹೆಚ್ಚಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ರಾಜ್ಯ ಸರ್ಕಾರವು ಸರ್ಕಾರಿ ಹುದ್ದೆಗಳಿಗೆ ಹೆಚ್ಚಿನ ಜನರನ್ನು ನೇಮಿಸಿಕೊಳ್ಳುವ ಗುರಿಯನ್ನು ಹೊಂದಿದ್ದು, ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ನೇಮಕಾತಿ ಅವಕಾಶಗಳನ್ನು ಕಳೆದುಕೊಂಡವರಿಗೆ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪರಿಷ್ಕೃತ ಗರಿಷ್ಠ ವಯೋಮಿತಿ ಈಗ ಮುಕ್ತ ವರ್ಗದ ಅಭ್ಯರ್ಥಿಗಳಿಗೆ 40 ವರ್ಷಗಳು ಮತ್ತು ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ 45 ವರ್ಷಗಳ ವರೆಗೆ ಹೆಚ್ಚಳ ಮಾಡಿದಂತಾಗಿದೆ.

ಕೋವಿಡ್-19 ಲಾಕ್‌ಡೌನ್‌ಗಳಿಂದಾಗಿ ದೇಶಾದ್ಯಂತ ಅನೇಕ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ನೀಡಲು ಒತ್ತಾಯಿಸಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸಾಂಕ್ರಾಮಿಕ ರೋಗದಿಂದಾಗಿ ಕಳೆದುಹೋದ ಸಮಯವನ್ನು ಉಲ್ಲೇಖಿಸಿ ವಯೋಮಿತಿ ಸಡಿಲಿಕೆ ನೀಡಲು ಅನೇಕ ಯುಪಿಎಸ್ಸಿ ಆಕಾಂಕ್ಷಿಗಳು ವಿನಂತಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!