ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವದಲ್ಲಿ ಸಾಧಕರಿಗೆ ಸನ್ಮಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಇಂದು ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ ವಿಧಾನಸೌಧದಲ್ಲಿ ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಲವಾರು ಸಾಧಕರನ್ನು ಗೌರವಿಸಲಾಯಿತು.
ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ, ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕಾ ಸಚಿವ ಡಾ. ಮುರುಗೇಶ್ ಆರ್ ನಿರಾಣಿ, ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ನೀರಾವರಿ ಸಚಿವ ಗೋವಿಂದ ಕಾರಜೋಳ, ವಾಲ್ಮೀಕಿ ಗುರು ಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ, ಭೋವಿ ಪೀಠದ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ ,ಶ್ರೀ ವಚನನಂದಾ ಸ್ವಾಮೀಜಿ, ಸೇರಿದಂತೆ ನಾಡಿನ ವಿವಿಧ ಮಠಾಧೀಶರು, ಶಾಸಕರು ಮತ್ತಿತರರು ಹಲವು ಸಾಧಕರನ್ನು ಸನ್ಮಾನಿಸಿ ವಾಲ್ಮೀಕಿ ಜಯಂತಿಯನ್ನು ಆಚರಿಸಿದರು.
ಈ ವೇಳೆ ಮಾತನಾಡಿದ ಸಚಿವ ನಿರಾಣಿಯವರು, ಜಗತ್ತಿಗೆ ರಾಮಾಯಣ ಎಂಬ ಮಹಾಕಾವ್ಯ ನೀಡಿದ ಆದಿಕವಿ ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯುವುದೇ ಆ‌ ಮಹಾ ಸಂತನಿಗೆ ನಾವು ನೀಡುವ ನಿಜವಾದ ಗೌರವವಾಗಿದೆ. ಅವರು ಸಾರಿರುವ ಮೌಲ್ಯಗಳನ್ನು ಹಾಗೂ ಆದರ್ಶಗಳನ್ನು ನಾವೆಲ್ಲ ಪಾಲಿಸೋಣ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!