ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಕೋಟ್ಯಂತರ ರೂ. ವಂಚನೆಗೆ ಸಂಬಂಧಿಸಿದಂತೆ ಸಿಐಡಿ ಮತ್ತು ಎಸ್‌ಐಟಿ ತಂಡ ತನಿಖೆಯನ್ನು ತೀವ್ರಗೊಳಿಸಲಾಗಿದೆ.
ಹಗರಣದ ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾ ಅವರ ಮನೆಯಿಂದ ಚಿನ್ನದ ಬಿಸ್ಕೆಟ್ಅನ್ನು ವಶಪಡಿಸಿಕೊಳ್ಳಲಾಗಿದೆ. ಎಸ್‌ಐಟಿ ತಂಡ 10 ಕೆಜಿ ಚಿನ್ನದ ಬಿಸ್ಕೆಟ್ಗಳನ್ನು ವಶಪಡಿಸಿಕೊಂಡಿದೆ ಎಂದು ಎಸ್‌ಐಟಿ ಮೂಲಗಳಿಂದ ಮಾಹಿತಿ ಲಭಿಸಿದೆ.
ಸತ್ಯನಾರಾಯಣ ಅವರು ವಾಲ್ಮೀಕಿಯ ವಂಚನೆಯ ಹಣವನ್ನು ಬಳಸಿಕೊಂಡು ಚಿನ್ನವನ್ನು ಖರೀದಿಸಿದ್ದಾರೆ ಎಂದು ಹೇಳಲಾಗುತ್ತದೆ. ಎಸ್‌ಐಟಿ ತಂಡ ಆತನನ್ನು ವಿಚಾರಣೆ ನಡೆಸಿದಾಗ 15 ಕೆಜಿ ಚಿನ್ನ ನೀಡುವುದಾಗಿ ಹೇಳಿದ್ದಾನೆ. ಅದರಂತೆ ಹೈದರಾಬಾದ್‌ನ ಪ್ಲಾಟ್ ನಲ್ಲಿ 10 ಕೆಜಿ ಚಿನ್ನದ ಬಿಸ್ಕೆಟ್ ಇಟ್ಟಿದ್ದಾಗಿ ಆತ ಬಹಿರಂಗಪಡಿಸಿದ್ದಾನೆ.
ಉಳಿದ ಚಿನ್ನದ ಬಿಸ್ಕೆಟ್ ಗಾಗಿ ಎಸ್‌ಐಟಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ವರ್ಮಾ ಇದುವರೆಗೂ ವಾಲ್ಮೀಕಿ ಹಗರಣದ ಹಣದಿಂದ ಬರೋಬ್ಬರಿ 35 ಕೆ.ಜಿ.ಚಿನ್ನದ ಬಿಸ್ಕೆಟ್ ಖರೀದಿ ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ.