ಮಹಾತ್ಮ ಗಾಂಧಿಯವರ ಪ್ರಭಾವ ಜಾಗತಿಕವಾಗಿದೆ: ಪ್ರಧಾನಿ ನರೇಂದ್ರ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಷ್ಟ್ರಪಿತ ಮಹಾತ್ಮ ಗಾಂಧಿಯವರ 154ನೇ ಜನ್ಮದಿನದ ಅಂಗವಾಗಿ ದೆಹಲಿಯ ರಾಜ್‌ಘಾಟ್‌ನಲ್ಲಿ ಗಾಂಧೀಜಿಯವರ ಸಮಾಧಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು. ಮಹಾತ್ಮಾ ಗಾಂಧಿಯವರ ಪ್ರಭಾವವು ಜಾಗತಿಕವಾಗಿದೆ. ಏಕತೆ ಮತ್ತು ಸಹಾನುಭೂತಿಯನ್ನು ಉತ್ತೇಜಿಸಲು ಪ್ರಪಂಚದಾದ್ಯಂತ ಜನರನ್ನು ಪ್ರೇರೇಪಿಸುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ.

ಮಹಾತ್ಮ ಗಾಂಧಿ ಅವರನ್ನು ಸ್ಮರಿಸಿ ಟ್ವೀಟ್ ಮಾಡಿದ ಅವರು “ಗಾಂಧಿ ಜಯಂತಿಯ ವಿಶೇಷ ಸಂದರ್ಭದಲ್ಲಿ ನಾನು ಮಹಾತ್ಮ ಗಾಂಧಿ ಅವರಿಗೆ ನಮಸ್ಕರಿಸುತ್ತೇನೆ. ಅವರ ಕಾಲಾತೀತ ಬೋಧನೆಗಳು ನಮ್ಮ ಮಾರ್ಗವನ್ನು ಬೆಳಗಿಸುತ್ತಲೇ ಇರುತ್ತವೆ. ಮಹಾತ್ಮಾ ಗಾಂಧಿಯವರ ಪ್ರಭಾವವು ಜಾಗತಿಕವಾಗಿದೆ, ಇಡೀ ಮಾನವಕುಲವನ್ನು ಏಕತೆ ಮತ್ತು ಸಹಾನುಭೂತಿಯ ಮನೋಭಾವವನ್ನು ಹೆಚ್ಚಿಸಲು ಪ್ರೇರೇಪಿಸುತ್ತದೆ. ಅವರ ಕನಸುಗಳನ್ನು ನನಸಾಗಿಸಲು ನಾವು ಯಾವಾಗಲೂ ಕೆಲಸ ಮಾಡೋಣ” ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಗಾಂಧಿ ಜಯಂತಿಯ ಮುನ್ನಾ ದಿನವಾದ ಭಾನುವಾರ ಕಸ ಗುಡಿಸುವ ಮೂಲಕ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಈ ಮೂಲಕ ಗಾಂಧಿಜಿಯವರಿಗೆ ಸ್ವಚ್ಛಾಂಜಲಿ ಅರ್ಪಿಸಿದ್ದರು. ಈ ಅಭಿಯಾನಕ್ಕೆ ದೇಶವ್ಯಾಪಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!