ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಬಹುಮತ ಗಳಿಸಿದ್ದು,ಇದೀಗ ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದಂತೆ ಚರ್ಚೆಗಳು ನಡೆಯುತ್ತಿವೆ. ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಂಬಂಧ ನ.25 ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ನ.26 ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಮಹಾಯುತಿ ಮೈತ್ರಿಕೂಟದ ದೊಡ್ಡ ಸಭೆಯೂ ಇದೇ ಸಮಯದಲ್ಲಿ ನಡೆಯುವ ಸಾಧ್ಯತೆಯಿದೆ. ಮಹಾಯುತಿ ಮೈತ್ರಿಕೂಟ 220 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಮುಂಬೈನ ಬಿಜೆಪಿ ಕಚೇರಿಯಲ್ಲಿ ಈಗಾಗಲೇ ಸಂಭ್ರಮಾಚರಣೆ ಆರಂಭವಾಗಿದೆ.