ಮಹಾರಾಷ್ಟ್ರದಲ್ಲಿ ‘ಮಹಾಯುತಿ’ ಸರಕಾರ: ಯಾರು​​ ಆಗ್ತಾರೆ ‘ಮಹಾ’ ಸಿಎಂ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ನಂತರ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಸರ್ಕಾರ ರಚನೆಗೆ ಹಕ್ಕು ಮಂಡನೆಗೆ ಸಿದ್ಧತೆ ನಡೆಸುತ್ತಿದ್ದು, ಪ್ರಮಾಣ ವಚನ ಸಮಾರಂಭ ನಾಳೆ ನಡೆಯುವ ಸಾಧ್ಯತೆ ಇದೆ.

ಶಿವಸೇನೆಯ ಏಕನಾಥ್ ಶಿಂಧೆ ಬಣದ ಹಿರಿಯ ಸಚಿವ ದೀಪಕ್ ಕೇಸರ್ಕರ್ ಮಾಹಿತಿ ಹಂಚಿಕೊಂಡಿದ್ದಾರೆ. ಮುಖ್ಯಮಂತ್ರಿ ಮತ್ತು ಡಿಸಿಎಂ ಮಾತ್ರ ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಯಾರ‍್ಯಾರು ಸಂಪುಟ ಸೇರುತ್ತಾರೆ ಎಂಬ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ.

ಶಿಂಧೆ ಮತ್ತು ಬಿಜೆಪಿಯ ಹಿರಿಯ ನಾಯಕ ದೇವೇಂದ್ರ ಫಡ್ನವಿಸ್ ಅವರು ಮುಖ್ಯಮಂತ್ರಿ ಸ್ಥಾನದ ಪ್ರಮುಖ ಆಕಾಂಕ್ಷಿಗಳಾಗಿದ್ದಾರೆ. ಅವರಲ್ಲಿ ಯಾರಿಗೆ ಈ ಬಾರಿ ಉನ್ನತ ಸ್ಥಾನ ಸಿಗುತ್ತದೆ ಎಂಬುದು ಸದ್ಯದ ಕುತೂಹಲವಾಗಿದೆ. ಇದರ ಜೊತೆಗೆ ಅಜಿತ್ ಪವಾರ್ ಕೂಡ ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿದ್ದಾರೆ. ಏತನ್ಮಧ್ಯೆ ಶಿವಸೇನೆ ಮತ್ತು ಎನ್​​ಸಿಪಿಯು ಕಾರ್ಯಕಾರಿ ಸಮಿತಿಗಳು ತಮ್ಮ ನಾಯಕರುಗಳಿಗೆ ಸರ್ಕಾರ ರಚನೆಯ ವಿಷಯವಾಗಿ ಸಂಪೂರ್ಣ ಅಧಿಕಾರ ನೀಡಿವೆ. ಆದರೆ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಬಿಜೆಪಿಯ ಹೈಕಮಾಂಡ್​​ ಏನು ಯೋಚಿಸಿದೆ ಎನ್ನುವುದು ಕಷ್ಟವಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!