ಮಹಾದೇವ ದೇವಾಲಯದಲ್ಲಿ ಮೆಟ್ಟಿಲು ಬಾವಿ ಕುಸಿತ : 25 ಮಂದಿ ಬಾವಿಯ ಪಾಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮಹಾದೇವ್ ಜುಲೇಲಾಲ್ ದೇವಸ್ಥಾನದ ಮೆಟ್ಟಿಲು ಬಾವಿ ಕುಸಿದ ಪರಿಣಾಮ 25 ಮಂದಿ ಬಾವಿಗೆ ಬಿದ್ದಿರುವ ಘಟನೆ ಮಧ್ಯ ಪ್ರದೇಶ ಇಂದೋರ್‌ನ ಪಟೇಲ್ ನಗರದಲ್ಲಿ ನಡೆದಿದೆ.

ಇಂದೋರ್‌ನ ಬೆಳೇಶ್ವರ ಮಹಾದೇವ್ ಜುಲೇಲಾಲ್ ದೇವಸ್ಥಾನದಲ್ಲಿರುವ ಪುರಾತನವಾದ ‘ಬಾವಡಿ ‘ (ದೊಡ್ಡ ಬಾವಿ) ರಾಮನವಮಿ ಹಬ್ಬದ ಸಂದರ್ಭದಲ್ಲಿ ಕುಸಿದುಬಿದ್ದಿದ್ದು, ಸುಮಾರು 25 ಜನರು ಒಳಗೆ ಬಿದ್ದಿದ್ದಾರೆ .

ಪುರಾತನ ಬಾವಡಿಯ ಮೇಲ್ಛಾವಣಿಯ ಮೇಲೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು ಮತ್ತು ಈ ಭಾರವನ್ನು ಹೊರಲು ಸಾಧ್ಯವಾಗದೆ ಅದು ಕುಸಿದಿದೆ ಎನ್ನಲಾಗಿದೆ.

ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಅಗ್ನಿಶಾಮಕ ದಳ, ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಈಗಾಗಲೇ ಸ್ಥಳಕ್ಕೆ ಧಾವಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!