Friday, September 12, 2025

ಪ್ರಚೋದನಾಕಾರಿ ಪೋಸ್ಟ್ ಆರೋಪ: ಮಹೇಶ್ ವಿಕ್ರಂ ಹೆಗ್ಡೆ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪ್ರಚೋದನಾಕಾರಿ ಪೋಸ್ಟ್ ಮಾಡಿರುವ ಆರೋಪದಲ್ಲಿ ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಮೂಡುಬಿದಿರೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಮುಖ್ಯಮಂತ್ರಿಯವನ್ನು ಉದ್ದೇಶಿಸಿ ಮಹೇಶ್ ಹಾಕಿದ್ದ ಫೇಸ್‌ಬುಕ್ ಪೋಸ್ಟ್ ವಿರುದ್ದ ಮೂಡುಬಿದರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ ನಂ: 143/2015 ಕಲಂ: 353(2) ಬಿಎನ್‌ಎಸ್ ರಂತೆ ಪ್ರಕರಣ ದಾಖಲಾಗಿದ್ದು, ಇದರ ಬೆನ್ನಿಗೇ ಬೆಂಗಳೂರಿಗೆ ತೆರಳಿದ ಪೊಲೀಸರು ಶುಕ್ರವಾರ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಶಾಸಕ ಸುನೀಲ್, ಪ್ರತಾಪ್ ಸಿಂಹ ಖಂಡನೆ
ಮಹೇಶ್ ವಿಕ್ರಂ ಹಗ್ಡೆ ಅವರ ಬಂಧನವನ್ನು ಶಾಸಕ ಸುನೀಲ್ ಕುಮಾರ್, ಮಾಜಿ ಸಂಸದ ಪ್ರತಾಪ ಸಿಂಹ ಖಂಡಿಸಿದ್ದಾರೆ. ಈ ಬಗ್ಗೆ ತಮ್ಮ ಸಮಾಜಿಕ ಜಾಲತಾಣ ಖಾತೆಯಲ್ಲಿ ಬರೆದುಕೊಂಡಿರುವ ಅವರು, ರಾಜ್ಯ ಸರ್ಕಾರದ ಈ ಹಿಂದು ವಿರೋಧಿ ಕ್ರಮವನ್ನು ಉಗ್ರವಾಗಿ ಖಂಡಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ