ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಅಂಕೋಲಾ:
ಅಡುಗೆ ಅನಿಲ ಬೆಲೆ ಏರಿಕೆಯನ್ನು ಖಂಡಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಕಣ್ಣಿಗೆ ಕಪ್ಪು ಪಟ್ಟಿ ಕಟ್ಟಿ ಪ್ರತಿಭಟನೆ ನಡೆಸಿದರು.
ಇಲ್ಲಿಯ ಜೈಹಿಂದ ವೃತ್ತದಲ್ಲಿ ಗ್ಯಾಸ್ ಸಿಲಿಂಡರ್ ಜೊತೆ ಧರಣಿ ನಡೆಸಿದರು. ಗೋವಿಂದ , ಗೋವಿಂದ ಎಲ್ಲವೂ ಗೋವಿಂದಾ ಎಂದು ಹಾಡು ಹಾಡಿ ಪ್ರತಿಭಟನೆ ನಡೆಸಿದರು.
ನಂತರ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುಜಾತಾ ಗಾಂವಕರ್ ಮಾತನಾಡಿ, ಅಡುಗೆ ಅನಿಲ ಮತ್ತು ಇಂಧನ ಬೆಲೆ ಏರಿಕೆಯಿಂದ ಬಡವರ ಬದುಕು ದುಸ್ತರವಾಗಿದೆ. ದಿನ ನಿತ್ಯದ ಬೆಲೆ ಏರಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರ ಈ ಸಮಸ್ಯೆಯ ಬಗ್ಗೆ ನಿರ್ಲಕ್ಷ್ಯ ಮಾಡಿವೆ. ಮೋದಿಯವರೇ ಮಹಿಳೆಯರ ನೋವು ಕಣ್ಣು ಬಿಟ್ಟು ನೋಡಿ, ಇಂಧನ ಬೆಲೆ ಇಳಿಸಿ ಎಂದು ಒತ್ತಾಯ ಮಾಡಿದರು.
ಈ ಸಂದರ್ಭದಲ್ಲಿ ಶಾಂತಿ ಆಗೇರ್, ಮಂಜುಳಾ ವೆರ್ಣೆಕರ್, ಜಯಲಕ್ಷ್ಮಿ , ಅಂಜಲಿ ಐಗಳ, ಜೈನಾಬಿ, ಪಾಂಡುರಂಗ ಗೌಡ, ರಾಜೇಶ ನಾಯ್ಕ, ಮಂಜುನಾಥ ನಾಯ್ಕ, ರಾಜು ಹರಿಕಾಂತ ಮತ್ತಿತರರು ಇದ್ದರು.