10 ಸಾವಿರ ಕೋಟಿ ವೆಚ್ಚದಲ್ಲಿ ಪುಣೆಯಲ್ಲಿ ಇವಿ ಉತ್ಪಾದನಾ ಸೌಲಭ್ಯವನ್ನು ಸ್ಥಾಪಿಸಲಿದೆ ಮಹಿಂದ್ರಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಭಾರತದ ಪ್ರಸಿದ್ಧ ವಾಹನ ತಯಾರಕ ಕಂಪನಿಯಾದ ಮಹೀಂದ್ರಾ & ಮಹೀಂದ್ರಾವು ಮಹಾರಾಷ್ಟ್ರದ ಪುಣೆಯಲ್ಲಿ 10,000 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಎಲೆಕ್ಟ್ರಿಕ್ ವಾಹನ (EV) ಉತ್ಪಾದನಾ ಘಟಕವನ್ನು ಸ್ಥಾಪಿಸುವುದಾಗಿ ಘೋಷಿಸಿದೆ. ಈ ಹೂಡಿಕೆಯನ್ನು ಮಹಾರಾಷ್ಟ್ರ ಸರ್ಕಾರದ ಎಲೆಕ್ಟ್ರಿಕ್ ವಾಹನಗಳಿಗೆ ಕೈಗಾರಿಕಾ ಉತ್ತೇಜನ ಯೋಜನೆಯಡಿಯಲ್ಲಿ ಅನುಮೋದಿಸಲಾಗಿದೆ ಎಂದು ಕಂಪನಿ ಹೇಳಿದೆ.

“ಕಂಪನಿಯು ತನ್ನ ಅಂಗಸಂಸ್ಥೆಯ ಮೂಲಕ, ಮಹೀಂದ್ರಾದ ಮುಂಬರುವ ಬಾರ್ನ್ ಎಲೆಕ್ಟ್ರಿಕ್ ವೆಹಿಕಲ್ಸ್ (BEVs) ಉತ್ಪಾದನಾ ಸೌಲಭ್ಯ, ಅಭಿವೃದ್ಧಿ ಮತ್ತು ಉತ್ಪಾದನೆಯನ್ನು ಸ್ಥಾಪಿಸಲು 7-8 ವರ್ಷಗಳ ಅವಧಿಯಲ್ಲಿ ಸುಮಾರು 10,000 ಕೋಟಿ ರೂಪಾಯಿಗಳ ಹೂಡಿಕೆಯನ್ನು ಮಾಡಲಿದೆ” ಎಂದು ಮಹೀಂದ್ರಾ ಹೇಳಿಕೆ ತಿಳಿಸಿದೆ.

ಈ ವರ್ಷ ಆಗಸ್ಟ್ 15 ರಂದು ಮಹೀಂದ್ರಾ ತನ್ನ ಕೆಲವು BEV ವಾಹನಗಳನ್ನು ಯುನೈಟೆಡ್ ಕಿಂಗ್‌ಡಂನಲ್ಲಿ ಪ್ರದರ್ಶಿಸಿತ್ತು.

ಪ್ರಕಟಣೆಯ ಕುರಿತು ಮಾತನಾಡಿದ ಮಹೀಂದ್ರಾ ಮತ್ತು ಮಹೀಂದ್ರಾ ಲಿಮಿಟೆಡ್‌ನ ಆಟೋ ಮತ್ತು ಫಾರ್ಮ್ ವಲಯಗಳ ಕಾರ್ಯನಿರ್ವಾಹಕ ನಿರ್ದೇಶಕ ರಾಜೇಶ್ ಜೆಜುರಿಕರ್, “ ಮಹಾರಾಷ್ಟ್ರದ ಸರಕಾರದ ಈ ಅನುಮೋದನೆಯಿಂದ ಪುಣೆಯಲ್ಲಿ ನಮ್ಮ ಇವಿ ಉತ್ಪಾದನಾ ಘಟಕವನ್ನು ಸ್ಥಾಪಿಸಲು ಮತ್ತು 70 ವರ್ಷಗಳಿಂದ ನಮ್ಮ ‘ತವರು’ ರಾಜ್ಯದಲ್ಲಿ ಹೂಡಿಕೆ ಮಾಡಲು ನಾವು ಸಂತೋಷಪಡುತ್ತೇವೆ” ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!