ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ ಎಂದ ಯದುವೀರ್ ಒಡೆಯರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೈಸೂರು ಚಾಮುಂಡಿ ಬೆಟ್ಟ ಧಾರ್ಮಿಕ ಕ್ಷೇತ್ರ, ನಾವು ಆ ತಾಯಿಯನ್ನು ಮಹಿಷಾಸುರಮರ್ದಿನಿ ಎಂದು ನಂಬುತ್ತೇವೆ. ಆದರೆ ಚಾಮುಂಡಿಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ ಎಂದು ಯದುವೀರ್ ಒಡೆಯರ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರಿಗೆ ಮಾತನಾಡಿದ ಅವರು. ಸಂವಿಧಾನದಲ್ಲಿ ಯಾವುದೇ ನಂಬಿಕೆಗಳನ್ನು ಇಟ್ಟುಕೊಳ್ಳಲು ಅವಕಾಶವಿದೆ. ಮನೆಯಲ್ಲಿ ಯಾವುದೇ ಆಚರಣೆ ಮಾಡಬಹುದು. ಸಾರ್ವಜನಿಕ ಸ್ಥಳಗಳಲ್ಲೂ ಸರ್ಕಾರದಿಂದ ಅನುಮತಿ ಪಡೆದು ಮಾಡಿಕೊಳ್ಳಬಹುದು. ನಿಯಮ ಅನುಸರಿಸಿ ಆಚರಣೆ ಮಾಡಿದರೆ ನಮಗೂ ಸಂತೋಷ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!